ETV Bharat / entertainment

ಅಲ್ಲಮ ಪ್ರಭು ಬಗ್ಗೆ ಸಿನಿಮಾ‌ ಬರುತ್ತಿರುವುದು ಹೆಮ್ಮೆಯ ವಿಷಯ: ಪ್ರಮೋದ್ ಮುತಾಲಿಕ್ - ಪ್ರಮೋದ್ ಮುತಾಲಿಕ್ ಹೇಳಿಕೆ

ವೀರಭೂಮಿ, ಧರ್ಮಭೂಮಿ, ಪುಣ್ಯಭೂಮಿ ಅಂತ ಬೇರೆ ಯಾವ ದೇಶಕ್ಕೂ ಹೆಸರಿಲ್ಲ.‌ ಆ ಎಲ್ಲಾ ಹೆಸರುಗಳಿರುವುದು ನಮ್ಮ ಭಾರತಕ್ಕೆ ಮಾತ್ರ. ದೇಶಕ್ಕೆ ಈ ರೀತಿಯ ಹೆಸರು ಬರಲು ಸಾಕಷ್ಟು ಜನ ಸಾಧು-ಸಂತರು ಇಲ್ಲಿ ಅವತರಿಸುವುದೇ ಕಾರಣ. ಅಂತಹ ಮಹಾ ಪುರುಷರಾದ ಶ್ರೀ ಅಲ್ಲಮ ಪ್ರಭು ಕುರಿತಾದ ಈ ಚಿತ್ರಕ್ಕೆ ಶುಭವಾಗಲಿ ಎಂದು ಪ್ರಮೋದ್ ಮುತಾಲಿಕ್ ಹಾರೈಸಿದರು.

Sri Allama Prabhu Movie Trailer Release
ಶ್ರೀ ಅಲ್ಲಮ ಪ್ರಭು ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭ
author img

By

Published : Jun 1, 2022, 2:46 PM IST

ಕನ್ನಡ ಚಿತ್ರರಂಗದಲ್ಲಿ ಕಮರ್ಷಿಯಲ್ ಸಿನಿಮಾಗಳ ಟ್ರೆಂಡ್ ಜೋರಾಗಿದೆ. ಈ ಮಧ್ಯೆ ಇದೀಗ 12ನೇ ಶತಮಾನದ ಮಹಾಶರಣ ಶ್ರೀ ಅಲ್ಲಮ ಪ್ರಭು ಅವರ ಜೀವನಾಧಾರಿತ ವ್ಯೋಮಕಾಯ ಸಿದ್ದ 'ಶ್ರೀ ಅಲ್ಲಮಪ್ರಭು' ಎಂಬ ಸಿನಿಮಾ ಬರ್ತಾ ಇದೆ. ಬಹುತೇಕ ಶೂಟಿಂಗ್ ಮುಗಿಸಿ ಬಿಡುಗಡೆಗೆ ಸಜ್ಜಾಗಿರುವ ಈ ಸಿನಿಮಾದ, ಟ್ರೈಲರ್ ಬಿಡುಗಡೆ ಸಮಾರಂಭ ನಡೆದಿದೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನಟ ನೆನಪರಲಿ ಪ್ರೇಮ್ ಆಗಮಿಸಿ ಚಿತ್ರದ ಟ್ರೈಲರ್ ಅನಾವರಣ ಮಾಡಿದರು‌‌. ಈ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ. ಹರೀಶ್ ಮುಖ್ಯ ಅತಿಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಸಾಥ್ ನೀಡಿದರು‌.

ಶ್ರೀ ಅಲ್ಲಮ ಪ್ರಭು ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭ

ಬಳಿಕ ಮಾತನಾಡಿದ, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನನಗೂ ಚಿತ್ರರಂಗಕ್ಕೂ ಸಂಬಂಧವಿಲ್ಲ. ನನ್ನ ಕ್ಷೇತ್ರವೇ ಬೇರೆ. ಆದರೂ ನನ್ನನ್ನು ಯಾಕೆ ಕರೆದರೂ ಎಂದು ಯೋಚಿಸುತ್ತಿದ್ದೆ?. ಅವರು ನನ್ನ ಮೇಲಿಟ್ಟಿರುವ ಪ್ರೀತಿ ಅಪಾರ. ಹಾಗಾಗಿ ಬಂದಿದ್ದೇನೆ. ಕಮರ್ಷಿಯಲ್ ಚಿತ್ರಗಳ ಪೈಪೋಟಿ ಇರುವ ಈ ಸಮಯದಲ್ಲಿ ಇಂತಹ ಕಥೆ ಆಯ್ದುಕೊಂಡಿರುವ ನಿರ್ಮಾಪಕರಿಗೆ ಮೊದಲು ಧನ್ಯವಾದ ತಿಳಿಸಬೇಕು. ವೀರಭೂಮಿ, ಧರ್ಮಭೂಮಿ, ಪುಣ್ಯಭೂಮಿ ಅಂತ ಬೇರೆ ಯಾವ ದೇಶಕ್ಕೂ ಹೆಸರಿಲ್ಲ.‌ ಆ ಎಲ್ಲಾ ಹೆಸರುಗಳಿರುವುದು ನಮ್ಮ ಭಾರತಕ್ಕೆ ಮಾತ್ರ. ಭಾರತಕ್ಕೆ ಈ ರೀತಿಯ ಹೆಸರು ಬರಲು ಸಾಕಷ್ಟು ಜನ ಸಾಧು-ಸಂತರು ಇಲ್ಲಿ ಅವತರಿಸುವುದೇ ಕಾರಣ. ಅಂತಹ ಮಹಾ ಪುರುಷರಾದ ಶ್ರೀ ಅಲ್ಲಮಪ್ರಭುಗಳ ಕುರಿತಾದ ಈ ಚಿತ್ರಕ್ಕೆ ಶುಭವಾಗಲಿ ಎಂದರು.

ನಟ ಪ್ರೇಮ್ ಮಾತನಾಡಿ, ನಮ್ಮದು ಪುಣ್ಯಭೂಮಿ. ಹಿಂದೆ ಎಷ್ಟೋ ಜನ ನಮ್ಮ ದೇಶದ ಸಂಪತ್ತು ಲೂಟಿ ಹೊಡೆದರೂ, ಇನ್ನೂ ನಮ್ಮಲ್ಲಿ ಸಂಪತ್ತು ಇದೆ ಎಂದರೆ ಅದಕ್ಕೆ ಈ ಸಾಧು-ಸಂತರ ಆಶೀರ್ವಾದವೇ ಕಾರಣ. ಮಹಾ ಶರಣ ಅಲ್ಲಮ ಪ್ರಭುಗಳ ಕುರಿತಾದ ಈ ಚಿತ್ರಕ್ಕೆ ಒಳಿತಾಗಲಿ ಎಂದರು.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಕೂಡ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಎನ್ ಕೌಂಟರ್ ದಯಾನಾಯಕ್ ಸಿನಿಮಾದಲ್ಲಿ ಅಭಿನಯಿಸಿದ್ದ, ಸಚಿನ್ ಸುವರ್ಣ ಅಲ್ಲಮ್ಮ ಪ್ರಭು ಪಾತ್ರ ಮಾಡಿದ್ದಾರೆ. ಇದರ ಜತೆಗೆ ನೀನಾಸಂ ಅಶ್ವಥ್, ರಮೇಶ್ ಪಂಡಿತ್, ಶೃಂಗೇರಿ ರಾಮಣ್ಣ, ಗಣೇಶ್ ರಾವ್ ಹೀಗೆ ದೊಡ್ಡ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ನಿರ್ದೇಶಕ ಶರಣ್ ಗದ್ವಾಲ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ನಿರ್ಮಾಪಕ ಮಾಧವಾನಂದ ಮಾತನಾಡಿ, ಅಲ್ಲಮಪ್ರಭುಗಳು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ಬಳ್ಳಿಗಾವಿಯಲ್ಲಿ. ಆದರೆ ಅವರ ಕಾರ್ಯಕ್ಷೇತ್ರ ಬಾಗಲಕೋಟೆ ಬಳಿಯ ತೇರದಾಳ. ಚಾಮರಸ ಕವಿ ಬರೆದಿರುವ ಪ್ರಭುಲಿಂಗ ಲೀಲೆ ಆಧರಿಸಿ ಈ ಚಿತ್ರ ಮಾಡಿದ್ದೇವೆ. 12ನೇ ಶತಮಾನದಲ್ಲಿ ಅಲ್ಲಮ ಪ್ರಭುಗಳು ಮಾಡಿದ ಸಾಧನೆಗಳು ಅನಂತ. ಅನುಭವ ಮಂಟಪದ ಮೊದಲ ಆಧ್ಯಕ್ಷರು ಅವರು. ಅಂತಹ ಮಹಾಶರಣರ ಬಗ್ಗೆ ಸಿನಿಮಾ ಮಾಡಿರುವುದು ನಮ್ಮ ಪುಣ್ಯ ಎಂದರು‌.

ನಿರ್ದೇಶಕ ಶರಣ್ ಗದ್ವಾಲ್ ಮಾತನಾಡಿ, ನಾನು ಸುಮಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹಾಯಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಿರ್ದೇಶಕನಾಗಿ ಇದು ಮೊದಲ ಚಿತ್ರ. 12ನೇಯ ಶತಮಾನದ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ತೆರೆಗೆ ತರುವುದು ಅಷ್ಟು ಸುಲಭವಲ್ಲ. ಆ ಪ್ರಯತ್ನ ಮಾಡಿದ್ದೇವೆ ಎಂದರು.

ಈ ಚಿತ್ರವನ್ನು ತೇರದಾಳ, ಬನವಾಸಿ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ಚಿತ್ರಕ್ಕೆ ಕೆಂಪರಾಜ್ ಸಂಕಲನವಿದ್ದು, ಛಾಯಾಗ್ರಾಹಕ ಗಿರಿ ಕ್ಯಾಮರಾ ವರ್ಕ್ ಇದೆ. ಸದ್ಯ ಟ್ರೈಲರ್ ನಿಂದ ಗಮನ ಸೆಳೆಯುತ್ತಿರುವ ಶ್ರೀ ಅಲ್ಲಮ್ಮ ಪ್ರಭು ಸಿನಿಮಾ ಇದೇ ತಿಂಗಳಲ್ಲಿ ತೆರೆಗೆ ಬರಲಿದೆ‌.

ಇದನ್ನೂ ಓದಿ: ಸಚಿನ್ ಅಭಿನಯದ 'ಶ್ರೀ ಅಲ್ಲಮಪ್ರಭು' ಮುಹೂರ್ತದ ಫೋಟೋಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.