ETV Bharat / entertainment

'ನಿರ್ಮುಕ್ತ'ಗೆ ಸಂಸದೆ ಸುಮಲತಾ ಅಂಬರೀಶ್ ಸಾಥ್​ - kannada Nirmuktha film song

ಏ.​ 29 ರಂದು 'ನಿರ್ಮುಕ್ತ' ಚಿತ್ರದ ಟೀಸರ್ ಹಾಗೂ ಹಾಡೊಂದು ಬಿಡುಗಡೆಯಾಗಿದೆ. ಈ ಸಿನಿಮಾಗೆ ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಹಾಗೂ ರಾಕ್‌ಲೈನ್ ವೆಂಕಟೇಶ್ ಶುಭಕೋರಿದ್ದಾರೆ. ಈ ಚಿತ್ರವನ್ನ ರಮ್ಯ ಶ್ರೀನಿವಾಸ್ ಎಂಬುವರು ನಿರ್ದೇಶಿಸಿದ್ದಾರೆ..

'ನಿರ್ಮುಕ್ತ' ಚಿತ್ರತಂಡ
'ನಿರ್ಮುಕ್ತ' ಚಿತ್ರತಂಡ
author img

By

Published : May 2, 2022, 2:23 PM IST

ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಿರ್ದೇಶಕಿಯರ ಕೊರತೆ ಇದೆ ಎಂಬ ಮಾತುಗಳು ಆಗಾಗ ಕೇಳಿ ಬರುತ್ತಿರುತ್ತದೆ. ಆದರೆ, ನಿಧಾನವಾಗಿ ಸ್ಯಾಂಡಲ್‌ವುಡ್​ನಲ್ಲಿ ಮಹಿಳೆಯರು ಸಿನಿಮಾ ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ‌. 'ನಿರ್ಮುಕ್ತ' ಸಿನಿಮಾ‌‌‌ವನ್ನು ರಮ್ಯ ಶ್ರೀನಿವಾಸ್ ಎಂಬುವರು ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೇ ಬರೆದಿದ್ದಾರೆ. ರೂಪಸ್ವಾಮಿ ಜೊತೆಗೂಡಿ ನಿರ್ಮಾಣವನ್ನು ಮಾಡಿದ್ದಾರೆ.

ಏ.​ 29ರಂದು 'ನಿರ್ಮುಕ್ತ' ಚಿತ್ರದ ಟೀಸರ್ ಹಾಗೂ ಹಾಡೊಂದರ ಬಿಡುಗಡೆ ಸಮಾರಂಭ ನೆರವೇರಿತು. ಸಂಸದೆ ಸುಮಲತಾ ಅಂಬರೀಶ್, ಅಭಿಷೇಕ್ ಅಂಬರೀಶ್ ಹಾಗೂ ರಾಕ್‌ಲೈನ್ ವೆಂಕಟೇಶ್ ಅತಿಥಿಗಳಾಗಿ ಆಗಮಿಸಿ ಸಿನಿಮಾಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಚಿತ್ರದ ನಾಯಕನ‌ ಹೆಸರು ಕೂಡ ಅಭಿಷೇಕ್. ಇವರು ರೆಬಲ್ ಸ್ಟಾರ್ ಅಂಬರೀಶ್ ಅವರ ತಂಗಿ ರಂಜನಿ ಅವರ ಪುತ್ರ. ನವ್ಯ ಪೂಜಾರಿ ನಾಯಕಿಯಾಗಿ ಕಾಣಿಸಿದ್ದಾರೆ.

ಚಿತ್ರದ ಕುರಿತು ಮಾತನಾಡಿದ ಸುಮಲತಾ ಅಂಬರೀಶ್, ಇದು ನಮ್ಮ ಕುಟುಂಬದ ಸಮಾರಂಭ. ಏನು ಮಾತನಾಡಬೇಕೋ ತಿಳಿಯುತ್ತಿಲ್ಲ. ಅಂಬರೀಶ್ ಅವರ ತಾತಾ ಚೌಡಯ್ಯ ಅವರು ಸಂಗೀತ ಕ್ಷೇತ್ರದಲ್ಲಿ ಬಹಳ ದೊಡ್ಡ ಹೆಸರು ಮಾಡಿದ್ದಾರೆ. ನಂತರ ಅಂಬರೀಶ್ ಸಿನಿಮಾದಲ್ಲಿ ಹೆಸರು ಮಾಡಿದರು. ಆನಂತರ ನಮ್ಮ ಅಭಿಷೇಕ್, ಈಗ ಈ ಅಭಿಷೇಕ್. ಎಲ್ಲರನ್ನು ನೋಡಿ ಸಂತೋಷವಾಗುತ್ತಿದೆ. ಅಭಿಷೇಕ್ ಸಿ.ಕೆ ಸಹ ಚಿತ್ರರಂಗದಲ್ಲಿ ಒಳ್ಳೆಯ ಹೆಸರು ಮಾಡಲಿ ಎಂದರು.

ಟೀಸರ್ ನೋಡಿದೆ, ಚೆನ್ನಾಗಿದೆ. ಅಭಿಷೇಕ್ ಸಿ.ಕೆ ನನ್ನ ಸಹೋದರ. ಅವರಿಗೆ ಶುಭವಾಗಲಿ ಎಂದು ಅಭಿಷೇಕ್ ಅಂಬರೀಶ್ ಹಾರೈಸಿದರು. ಚಿತ್ರ ತಂಡಕ್ಕೆ ಶುಭಕೋರಿದ ರಾಕ್‌ಲೈನ್ ವೆಂಕಟೇಶ್, ಅಂಬರೀಶ್ ಅವರನ್ನು ನೆನೆದು ಭಾವುಕರಾದರು. ಮೂಲತಃ ವೈದ್ಯರಾಗಿರುವ ಡಾ.ರೂಪಸ್ವಾಮಿ ಈ ಸಿನಿಮಾವನ್ನ ನಿರ್ಮಾಣ ಮಾಡಿದ್ದಾರೆ.

ಸಾಮ್ರಾಟ್ ನಿರ್ಮುಕ್ತ ಸಿನಿಮಾಗೆ ಸಂಗೀತ ನೀಡಿದ್ದಾರೆ. ಇದೊಂದು ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿದ್ದು, ನಿರ್ದೇಶನ ಮಾಡಲು ಸಹಕಾರ ನೀಡಿದ ತನ್ನ ಪತಿ ಶ್ರೀನಿವಾಸ್ ಹಾಗೂ ಬಂದಿದ್ದ ಗಣ್ಯರಿಗೆ ನಿರ್ದೇಶಕಿ ರಮ್ಯ ಶ್ರೀನಿವಾಸ್ ಧನ್ಯವಾದ ತಿಳಿಸಿದರು.

ಇದನ್ನೂ ಓದಿ: ಬೆಂಕಿ ಪೊಟ್ಟಣದಷ್ಟಿರುವ ಪುಟ್ಟ ಬ್ಯಾಗ್​ಗೆ ನಟಿ ದಿಶಾ ಪಟಾನಿ ಅಷ್ಟೊಂದು ದುಡ್ಡು ಕೊಟ್ರಾ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.