ಬೆಂಗಳೂರು/ರಾಮನಗರ: ಕಂಪ್ಲಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ಗೆ ಮತ್ತೆ ಸಂಕಷ್ಟ ಬಂದಿದೆ. ಬಳ್ಳಾರಿ ಜಿಲ್ಲೆಯ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಆರೋಪ ಪ್ರಕರಣ ಸಂಬಂಧ ಬಿಡದಿ ಪೊಲೀಸರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಚಾರ್ಜ್ಶೀಟ್ನಲ್ಲಿ ಐಪಿಸಿ ಸೆಕ್ಷನ್ 323, 324, 325, 307, 504, 506 ಅಡಿ ಪ್ರಕರಣ ದಾಖಲಿಸಿದ್ದು, ಮೊದಲನೇ ಆರೋಪಿಯಾಗಿ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರ ಹೆಸರನ್ನು ನಮೂದಿಸಲಾಗಿದೆ.
ಶಾಸಕರಾದ ಎಸ್.ರಾಮಪ್ಪ, ಟಿ.ರಘುಮೂರ್ತಿ, ಮಾಜಿ ಸಚಿವ ತನ್ವೀರ್ ಸೇಠ್, ಭೀಮಾನಾಯಕ್, ಮಾಜಿ ಸಚಿವ ತುಕಾರಾಂ ಅವರನ್ನು ಪ್ರತ್ಯಕ್ಷ ಸಾಕ್ಷಿಗಳಾಗಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಹೊಟೇಲ್ ಸಿಬ್ಬಂದಿ ಹಾಗೂ ವೈದ್ಯರು ಸೇರಿದಂತೆ 41 ಸಾಕ್ಷಿಗಳ ಹೇಳಿಕೆಯನ್ನು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.