ETV Bharat / headlines

ರೈತರ ಪರ ಉಪವಾಸ ಸತ್ಯಾಗ್ರಹ ಕೈಬಿಟ್ಟ ಅಣ್ಣಾ ಹಜಾರೆ... ಕಾರಣ? - ಅಣ್ಣಾ ಹಜಾರೆ ಇತ್ತೀಚಿನ ಸುದ್ದಿ

ಕೃಷಿ ಕಾನೂನುಗಳ ವಿರುದ್ಧ ಸತ್ಯಾಗ್ರಹ ನಡೆಸಲು ಮುಂದಾಗಿದ್ದ ಹಿರಿಯ ಹೋರಾಟಗಾರ ಅಣ್ಣಾ ಹಜಾರೆ ತಮ್ಮ ನಿರ್ಧಾರ ಹಿಂಪಡೆದುಕೊಂಡಿದ್ದಾರೆ.

Anna Hazare
Anna Hazare
author img

By

Published : Jan 29, 2021, 9:14 PM IST

Updated : Jan 29, 2021, 10:34 PM IST

ಅಹ್ಮದ್​ನಗರ: ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ನಾಳೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಹೇಳಿದ್ದ ಹಿರಿಯ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ತಮ್ಮ ನಿರ್ಧಾರ ಹಿಂಪಡೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ನಾಳೆಯಿಂದ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಹಿರಿಯ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಘೋಷಣೆ ಮಾಡಿದ್ದರು. ಆದರೆ ಇದೀಗ ಅದನ್ನ ಹಿಂಪಡೆದುಕೊಳ್ಳುವುದಾಗಿ ಹೇಳಿದ್ದಾರೆ.

  • Anna Hazare has decided not to protest from tomorrow over various demands related to farmers:Anna Hazare's Office

    MoS Agriculture Kailash Choudhary along with LoP Devendra Fadnavis met Hazare at his hometown Ralegansiddhi today to convince him to not start protest.#Maharashtra pic.twitter.com/jnKemiBbIw

    — ANI (@ANI) January 29, 2021 " class="align-text-top noRightClick twitterSection" data=" ">

ಅಣ್ಣಾ ಹಜಾರೆ ಹೇಳಿದ್ದೇನು!?: ಕಳೆದ ಹಲವು ವರ್ಷಗಳಿಂದ ವಿವಿಧ ವಿಷಯಗಳನ್ನಿಟ್ಟುಕೊಂಡು ನಾನು ಆಂದೋಲನ ಮಾಡುತ್ತಿದ್ದೇನೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ಕ್ರೈಂ ಅಲ್ಲ. ಕಳೆದ ಮೂರು ವರ್ಷಗಳಿಂದ ರೈತರ ಸಮಸ್ಯೆಗಳ ಬಗ್ಗೆ ನಾನು ಹೋರಾಟ ನಡೆಸಿದ್ದೇನೆ. ಸರಿಯಾದ ಬೆಲೆ ಸಿಗದ ಕಾರಣ ಹಲವು ಅನ್ನದಾತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಾನು ಕೇಂದ್ರಕ್ಕೆ ಪತ್ರ ಸಹ ಬರೆದಿದ್ದೇನೆ.

15 ಅಂಶಗಳನ್ನಿಟ್ಟುಕೊಂಡು ನಾನು ಕೇಂದ್ರಕ್ಕೆ ಪತ್ರ ಬರೆದಿದ್ದು, ಅವುಗಳನ್ನು ಕಾರ್ಯಗತಗೊಳಿಸಲು ಕೇಂದ್ರ ನಿರ್ಧರಿಸಿರುವುದರಿಂದ ನಾನು ಉಪವಾಸ ಸತ್ಯಾಗ್ರಹ ಕೈಬಿಡುತ್ತಿದ್ದೇನೆ ಎಂದಿದ್ದಾರೆ.

ಮನವೊಲಿಕೆ ಮಾಡಿದ ಫಡ್ನವೀಸ್: ಅಣ್ಣಾ ಹಜಾರೆ ಜತೆ ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​, ಕೇಂದ್ರ ಸಚಿವ ಕೈಲಾಶ್ ಚೌಧರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಗಿರೀಶ್ ಮಹಾಜನ್​ ರಾಲೇಗಣ ಸಿದ್ಧಿಯಲ್ಲಿರುವ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಈ ವೇಳೆ ಸತ್ಯಾಗ್ರಹ ಕೈಗೊಳ್ಳದಂತೆ ಮನವಿ ಮಾಡಿದ್ದರು. ಇದಕ್ಕೆ ಹೋರಾಟಗಾರ ಅಣ್ಣಾ ಹಜಾರೆ ಒಪ್ಪಿಗೆ ಸೂಚಿಸಿದ್ದಾರೆ.

ಕಳೆದ ಕೆಲ ತಿಂಗಳಿಂದ ರೈತರ ಸಮಸ್ಯೆಗಳ ಬಗ್ಗೆ ಅಣ್ಣಾ ಹಜಾರೆ ಕೇಂದ್ರ ಕೃಷಿ ಸಚಿವರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆದರೆ ಇದಕ್ಕೆ ಯಾವುದೇ ರೀತಿಯ ಸಕಾರಾತ್ಮಕ ಉತ್ತರ ಬಾರದ ಕಾರಣ ಅವರು ನಾಳೆಯಿಂದ ಸತ್ಯಾಗ್ರಹ ಹಮ್ಮಿಕೊಳ್ಳಲು ಮುಂದಾಗಿದ್ದರು.

Last Updated : Jan 29, 2021, 10:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.