ETV Bharat / headlines

ಆಕ್ಸಿಜನ್ ಪೂರೈಕೆಯಲ್ಲಿ ಸಮಸ್ಯೆ ಆದರೆ ಅಧಿಕಾರಿಗಳನ್ನ ಸಂಪರ್ಕಿಸಿ ; ಸಿಎಂ ಸೂಚನೆ - ಬೆಂಗಳೂರು ಸುದ್ದಿ

ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ, ಟ್ಯಾಂಕರ್​ಗಳನ್ನು ಆಕ್ಸಿಜನ್ ಸಾಗಣೆಗೆ ಪರಿವರ್ತಿಸಲು ಕ್ರಮವಹಿಸಬೇಕು, ತುರ್ತು ಅಗತ್ಯಕ್ಕಾಗಿ ಆಕ್ಸಿಜನ್ ವಾಹನಗಳ ಚಾಲನೆಗಾಗಿ ಎಲ್‍ಪಿಜಿ ಟ್ಯಾಂಕರ್​ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳಬೇಕು, ಲಭ್ಯವಿರುವ ಟ್ಯಾಂಕರ್​ಗಳನ್ನು ಗರಿಷ್ಠ ಪ್ರಮಾಣದಲ್ಲಿ‌ ಬಳಸಿಕೊಳ್ಳಲು ಸಿಎಂ ಸೂಚಿಸಿದರು..

CM
CM
author img

By

Published : May 3, 2021, 7:03 PM IST

ಬೆಂಗಳೂರು : ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರು ಆಕ್ಸಿಜನ್ ಸರಬರಾಜಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನಿಯೋಜಿಸಲ್ಪಟ್ಟ ಅಧಿಕಾರಿಗೆ ಸಂಪರ್ಕಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡು ತಡೆರಹಿತವಾಗಿ ಆಕ್ಸಿಜನ್ ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ದೇಶನ ನೀಡಿದ್ದಾರೆ.

ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜುದಾರರ ಸಭೆ ನಡೆಯಿತು. ಸಭೆಯಲ್ಲಿ ಆಕ್ಸಿಜನ್ ಪೂರೈಕೆಗೆ ಇರುವ ಸಮಸ್ಯೆಗಳ ಕುರಿತು ವಿಸ್ತೃತವಾದ ಚರ್ಚೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಿಎಂ, ಈಗ ಕೇಂದ್ರ ಸರ್ಕಾರವು ಹಂಚಿಕೆ ಮಾಡಿರುವ ಆಕ್ಸಿಜನ್ ಕೋಟಾದಲ್ಲಿ ಯಾವುದೇ ರೀತಿ ಕಡಿತವಾಗದಂತೆ ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು, ಆಕ್ಸಿಜನ್ ಟ್ಯಾಂಕರ್​ಗಳ ಫಿಲ್ಲಿಂಗ್ ಅವಧಿಯನ್ನು ಕಡಿತಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಆಕ್ಸಿಜನ್ ಟ್ಯಾಂಕರ್​ಗಳು ತಡೆರಹಿತ ಪ್ರಯಾಣಕ್ಕಾಗಿ ಗ್ರೀನ್ ಕಾರಿಡಾರ್​ಗಳನ್ನು ಒದಗಿಸಬೇಕು. ಟೋಲ್‍ಗಳಲ್ಲಿ ಅನಗತ್ಯ ವಿಳಂಬ ತಪ್ಪಿಸಲು ಟೋಲ್‍ಗಳಿಗೆ ನಿರ್ದೇಶನ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನೈಟ್ರೋಜನ್, ಆರ್ಗನ್ ಅನಿಲಗಳ ಸಾಗಣೆ, ಟ್ಯಾಂಕರ್​ಗಳನ್ನು ಆಕ್ಸಿಜನ್ ಸಾಗಣೆಗೆ ಪರಿವರ್ತಿಸಲು ಕ್ರಮವಹಿಸಬೇಕು, ತುರ್ತು ಅಗತ್ಯಕ್ಕಾಗಿ ಆಕ್ಸಿಜನ್ ವಾಹನಗಳ ಚಾಲನೆಗಾಗಿ ಎಲ್‍ಪಿಜಿ ಟ್ಯಾಂಕರ್​ಗಳ ಚಾಲಕರ ಪಟ್ಟಿಯನ್ನು ಸಿದ್ಧಪಡಿಸಿಟ್ಟುಕೊಂಡು ಅಗತ್ಯವಿದ್ದಲ್ಲಿ ಅವರ ಸೇವೆಯನ್ನು ಬಳಸಿಕೊಳ್ಳಬೇಕು, ಲಭ್ಯವಿರುವ ಟ್ಯಾಂಕರ್​ಗಳನ್ನು ಗರಿಷ್ಠ ಪ್ರಮಾಣದಲ್ಲಿ‌ ಬಳಸಿಕೊಳ್ಳಲು ಸಿಎಂ ಸೂಚಿಸಿದರು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಆಕ್ಸಿಜನ್ ಉತ್ಪಾದಕರು ಮತ್ತು ಸರಬರಾಜು ಕಂಪನಿ ಪ್ರತಿನಿಧಿಗಳು ಭಾಗಿಯಾಗಿದ್ದರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.