ನವದೆಹಲಿ: ಹೆಚ್ಚುತ್ತಿರುವ ಕೊರೊನಾ ಬಿಕ್ಕಟ್ಟು ಹಿನ್ನೆಲೆ ಪಿಎಂ ಮೋದಿ ಮೇ 18 ಮತ್ತು 20 ರಂದು ಎರಡು ಉನ್ನತ ಮಟ್ಟದ ಸಭೆಗಳನ್ನು ನಡೆಸಲಿದ್ದಾರೆ.
ಯಾವ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆಯೋ ಅಂತಹ ಜಿಲ್ಲಾಧಿಕಾರಿಗಳ ಜೊತೆ ಮೋದಿ ಅವರು ಸಂವಹನ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಈ ಸಮಯದಲ್ಲಿ ರಾಜ್ಯದ ಸಿಎಂಗಳೂ ಕೂಡ ಹಾಜರಾಗಲಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೇ 18 ರಂದು 9 ರಾಜ್ಯಗಳ 46 ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ. ಇದರ ನಂತರ ಮೇ 20 ರಂದು ಪಿಎಂ ಮೋದಿ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.