ಚಾಮರಾಜನಗರ: ಉಪ ಚುನಾವಣೆ ಪ್ರಚಾರಕ್ಕೆ ತೆರಳಿದ್ದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಇಂದು ಕೊರೊನಾ ದೃಢವಾಗಿದ್ದು ಸದ್ಯ ಹೋಂ ಐಸೋಲೇಷನ್ ನಲ್ಲಿದ್ದಾರೆ.
ಕಳೆದ ಒಂದು ವಾರದಿಂದ ಬೆಳಗಾವಿ, ಮಸ್ಕಿ ಹಾಗೂ ಬಸವಕಲ್ಯಾಣದ ಉಪಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡು ಎರಡು ದಿನಗಳ ಹಿಂದೆಯಷ್ಟೇ ಸ್ವಕ್ಷೇತ್ರಕ್ಕೆ ಹಿಂತಿರುಗಿದ್ದರು. ನೆಗಡಿ ಹಾಗೂ ಮೈ-ಕೈ ನೋವಿನ ಗುಣಲಕ್ಷಣ ಕಾಣಿಸಿಕೊಂಡ ಹಿನ್ನೆಲೆ ಇಂದು ಪರೀಕ್ಷೆ ಮಾಡಿಸಿಕೊಂಡ ವೇಳೆ ಕೋವಿಡ್ ದೃಢಪಟ್ಟಿದೆ.
ಇದನ್ನೂ ಓದಿ: ಸೂರ್ಯಕುಮಾರ್ ಸಿಕ್ಸರ್ಗೆ ಶಾಕ್ ಆದ ಹಾರ್ದಿಕ್ ಪಾಂಡ್ಯ: ವಿಡಿಯೋ ನೋಡಿ
ಶಾಸಕರ ಚಾಲಕ ಹಾಗೂ ಗನ್ ಮ್ಯಾನ್ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು, ವರದಿ ಬರಬೇಕಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಲಾಕ್ಡೌನ್ ಇಲ್ಲ; ಏ.18 ರಂದು ಸರ್ವಪಕ್ಷ ಸಭೆ ಬಳಿಕ ಮುಂದಿನ ನಿರ್ಧಾರ: ಸಿಎಂ