ETV Bharat / headlines

ಚುನಾವಣಾ ಆಯೋಗದ ಸದಸ್ಯರನ್ನು ನೇಮಿಸಲು ಸ್ವತಂತ್ರ ಸಮಿತಿ ರಚಿಸಿ: ಸುಪ್ರೀಂಗೆ ಮನವಿ - ಚುನಾವಣಾ ಆಯೋಗದಲ್ಲಿ ಸದಸ್ಯರನ್ನು ನೇಮಿಸಲು ಸ್ವತಂತ್ರ ಆಯ್ಕೆ ಸಮಿತಿಯನ್ನು ರಚಿಸಿ

ಪ್ರಜಾಪ್ರಭುತ್ವವು ಸಂವಿಧಾನದ ಮೂಲಭೂತ ರಚನೆಯ ಒಂದು ಮುಖ. ಮುಕ್ತ ಹಾಗೂ ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಮತ್ತು ನಮ್ಮ ದೇಶದಲ್ಲಿ ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ಚುನಾವಣಾ ಆಯೋಗವನ್ನು ರಾಜಕೀಯ ಮತ್ತು ಕಾರ್ಯಕಾರಿ ಹಸ್ತಕ್ಷೇಪದಿಂದ ಬೇರ್ಪಡಿಸಬೇಕು ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಘಟನೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

plea-in-sc-seeks-independent-committee-to-appoint-ec-members

author img

By

Published : May 17, 2021, 6:39 PM IST

ನವದೆಹಲಿ: ಚುನಾವಣಾ ಆಯೋಗಕ್ಕೆ ಸದಸ್ಯರನ್ನು ನೇಮಿಸಲು ಸ್ವತಂತ್ರ ಆಯ್ಕೆ ಸಮಿತಿಯನ್ನು ರಚಿಸುವಂತೆ ನಿರ್ದೇಶನ ಕೋರಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಂಘಟನೆ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

"ಆಯ್ಕೆ ಮತ್ತು ನಿರ್ಧಾರ' ಕಾರ್ಯನಿರ್ವಾಹಕನ ಏಕೈಕ ಪಾತ್ರವಾಗಿದ್ದು, ಅದರ ರಚನೆಯ ಉದ್ದೇಶವನ್ನು ಸೋಲುವಂತೆ ಮಾಡುತ್ತದೆ. ಹಾಗೆ ಅದು ಕಾರ್ಯನಿರ್ವಾಹಕನ ಭಾಗವಾಗಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾಪ್ರಭುತ್ವವು ಸಂವಿಧಾನದ ಮೂಲಭೂತ ರಚನೆಯ ಒಂದು ಮುಖ. ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು ಹಾಗೂ ನಮ್ಮ ದೇಶದಲ್ಲಿ ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡಿಕೊಳ್ಳಲು ಚುನಾವಣಾ ಆಯೋಗವನ್ನು ರಾಜಕೀಯ ಮತ್ತು ಕಾರ್ಯಕಾರಿ ಹಸ್ತಕ್ಷೇಪದಿಂದ ಬೇರ್ಪಡಿಸಬೇಕು ಎಂದು ಮನವಿ ಮಾಡಲಾಗಿದೆ.

ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಸಲ್ಲಿಸಿದ ಮನವಿಯಲ್ಲಿ, ಚುನಾವಣಾ ಆಯೋಗವು ವಿವಿಧ ಪಕ್ಷಗಳ ನಡುವೆ 17 ಅರೆ-ನ್ಯಾಯಾಂಗ ಕಾರ್ಯಗಳನ್ನು ನಿರ್ವಹಿಸುತ್ತದೆ. ಅಂತಹ ಸಂದರ್ಭದಲ್ಲಿ, ಪಕ್ಷಪಾತ ಇರುವುದರಿಂದ ಕಾರ್ಯನಿರ್ವಾಹಕರು ಚುನಾವಣಾ ಸದಸ್ಯರ ಆಯ್ಕೆ ಪ್ರಕ್ರಿಯೆಯ ಭಾಗವಾಗಿರುವುದು ಸೂಕ್ತವಲ್ಲ ಎಂದು ವಾದಿಸಿದ್ದಾರೆ.

255ನೇ ಕಾನೂನು ಆಯೋಗದ ವರದಿಯನ್ನು ಅನುಷ್ಠಾನಗೊಳಿಸಲು ಸಂಸ್ಥೆ ಕೋರಿದ್ದು, ಇದು ಚುನಾವಣಾ ಆಯುಕ್ತರನ್ನು ರಾಷ್ಟ್ರಪತಿಗಳು, ಪ್ರಧಾನಿ, ಲೋಕಸಭೆಯ ಪ್ರತಿಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯೊಂದಿಗೆ ಸಮಾಲೋಚಿಸಿ ಶಿಫಾರಸು ಮಾಡಬೇಕು ಎಂದು ಮನವಿ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.