ಬೆಳಗಾವಿ: ಮಂಗಳಾ ಅಂಗಡಿ ಅವರಿಗೆ ಚುನಾವಣೆ ಆಯೋಗ ಉಪಚುನಾವಣೆಯಲ್ಲಿ ಗೆದ್ದಿರುವ ಸರ್ಟಿಫಿಕೇಟ್ ನೀಡಿರಬಹುದು. ಆದರೆ, ಆ ಸರ್ಟಿಫಿಕೇಟ್ ನಾನು ರಾಜ್ಯದ ಜನರಿಂದ ಪಡೆದಿದ್ದೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿನ ಕಾಂಗ್ರೆಸ್ ಸಭಾಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ನಮ್ಮ ಲೆಕ್ಕಾಚಾರಲ್ಲಿ 70 ಸಾವಿರ ಮೈನಸ್ ಇತ್ತು, ನಮ್ಮ ಜನರು ನನ್ನನ್ನು ಗೆಲುವಿನ ದಡ ಸೇರಿಸಿದ್ದಾರೆ. ತೀವ್ರ ಪೈಪೋಟಿ ನೀಡಿದ್ದೇವೆ. ಬಿಜೆಪಿಗೆ ನಮ್ಮ ಶಕ್ತಿ ಏನು ಎಂಬುವುದನ್ನು ಚುನಾವಣೆ ಮೂಲಕ ಉತ್ತರ ನೀಡಿದ್ದೇವೆ ಎಂದರು.
ಜನತೆ ವಿಶ್ವಾಸಕ್ಕೆ ಸ್ವಲ್ಪ ಹಿನ್ನಡೆಯಾಗಿದೆ. ಚುನಾವಣೆ ಸೋತಿರಬಹುದು. ಆದರೆ, ಪಕ್ಷಕ್ಕೆ ಬಹಳಷ್ಟು ಲಾಭವಾಗಿದೆ. ರಾಜ್ಯದ ಜನತೆಯ ಚಿತ್ತ ಬೆಳಗಾವಿ ಚುನಾವಣೆ ಮೇಲೆ ನೆಟ್ಟಿತ್ತು ಅಷ್ಟು ಸಾಕು, ಮುಂದಿನ ಚುನಾವಣೆಗೆ ಈ ಫಲಿತಾಂಶ ದಿಕ್ಸೂಚಿಯಾಗಿದೆ ಎಂದು ನಗೆ ಬೀರಿದರು.
ಈ ಚುನಾವಣೆಯಲ್ಲಿ ನಾವು ಸೋತರೂ, ನಾವೇ ಗೆದ್ದಿದ್ದೇವೆ. ಟೆಕ್ನಿಕಲ್ ಆಗಿ ಚುನಾವಣೆ ಸೋತಿದ್ದೇವೆ ಅಷ್ಟೇ. ಎಂಟು ಕ್ಷೇತ್ರದ ಶಾಸಕರು, ಮಾಜಿ ಶಾಸಕರು ನಮ್ಮ ಪರವಾಗಿ ಉತ್ತಮ ಕೆಲಸ ಮಾಡಿದ್ದಾರೆ. ವಿಶೇಷವಾಗಿ ಈ ಚುನಾವಣೆಯಲ್ಲಿ ಸ್ವಯಂ ಪ್ರೇರಣೆಯಿಂದ ಜನರು ನಮ್ಮ ಪರ ಪ್ರಚಾರ ಮಾಡಿದ್ದಾರೆ ಅವರಿಗೆ ಧನ್ಯವಾದಗಳು. ಸತೀಶ ಜಾರಕಿಹೊಳಿ ಗೆಲುವಿಗೆ ಜನತೆ ಹಗಲಿರುಳು ಶ್ರಮಿಸಿದ್ದಾರೆ. ಇಲ್ಲಿ ಪ್ರಚಾರ ನಡೆಸಿ, ಮಸ್ಕಿ ಚುನಾವಣೆಗೆ ಎಂಟ್ರಿ ಕೊಟ್ಟಿದು ಒಳ್ಳೆಯ ಫಲಿತಾಂಶ ಸಿಕ್ಕಿದೆ ಎಂದರು.
30 ವರ್ಷಗಳ ರಾಜಕೀಯಲ್ಲಿ ಮೊದಲ ಭಾರಿಗೆ ತೀವ್ರ ಕುತೂಹಲ ಮೂಡಿಸಿದ ಫಲಿತಾಂಶ ಇದಾಗಿದೆ. ಅಲ್ಪ ಹಿನ್ನೆಡೆಯಾಗಿದೆ. ಕೊನೆ ಗಳಿಗೆವರೆಗೂ ನೆಕ್ ಟು ನೆಕ್ ಫೈಟ್ ಕೊಟ್ಟಿದ್ದೇವೆ, ಮತ್ತೊಮ್ಮೆ ಕಾಂಗ್ರೆಸ್ ಪ್ರಭಾವ ಬಿಜೆಪಿಗೆ ತಿಳಿದಿದೆ ಎಂದರು.
ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಲೀಡ್ ಆಗಿರುವ ವಿಚಾರವಾಗಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಫೈಟ್ ಮಾಡುವ ಅವಕಾಶವಿದೆ. ರಾಜ್ಯದ ರಾಜಕಾರಣವನ್ನು ಗೋಕಾಕ್ ರಾಜಕಾರಣಕ್ಕೆ ಹೋಲಿಸಲು ಸಾಧ್ಯವಿಲ್ಲ. ಆ ಕ್ಷೇತ್ರದಲ್ಲಿ ನಮಗೆ ಬರಬೇಕಾದ ವೋಟ್ ಬಂದಿದೆ. ತಪ್ಪಿದು, ಬೆಳಗಾವಿ ದಕ್ಷಿಣ ಹಾಗೂ ಗ್ರಾಮೀಣ ಕ್ಷೇತ್ರದಲ್ಲಿ ಎಂದರು.
ಕೋವಿಡ್ ವಿಚಾರವಾಗಿ ಮಾತನಾಡಿದ ಅವರು, 24 ಮಂದಿ ಸಾವಿಗೆ ಸರ್ಕಾರವೇ ನೇರ ಹೊಣೆ, ಜನರನ್ನು ರಕ್ಷಿಸುವಲ್ಲಿ ಸರ್ಕಾರ ಎಡವಿದೆ. ಮೊದಲಿಗೆ ಕೋವಿಡ್ ಪರಿಣಾಮ ಎದುರಾಗಿತ್ತು, ಯಾಕೆ ನಿರ್ಲಕ್ಷ್ಯ ಮಾಡಬೇಕು ಎಂದು ಟೀಕಿಸಿದರು.
ಇದನ್ನೂ ಓದಿ: ಮಂಗಳಾ ಅಂಗಡಿ ರೋಚಕ ಗೆಲುವು.. ಸೋತರೂ ತಮ್ಮ ಸಾಮರ್ಥ್ಯ ತೋರಿಸಿದ ಸತೀಶ್ ಜಾರಕಿಹೊಳಿ..