ನೈಮೇ(ನೈಜರ್): ಪಶ್ಚಿಮ ಆಫ್ರಿಕಾದ ನೈಜರ್ನ ಮರಡಿ ಎಂಬಲ್ಲಿ ಶಾಲೆಯೊಂದರಲ್ಲಿ ಬೆಂಕಿ ಹೊತ್ತಿಕೊಂಡು 26 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಹಲವಾರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ.
ನರ್ಸರಿ ಮತ್ತು ಪ್ರಾಥಮಿಕ ಶಾಲೆಯ 3ರಿಂದ 8 ವರ್ಷ ವಯೋಮಿತಿಯ ಮಕ್ಕಳು ಬೆಂಕಿಯ ಕೆನ್ನಾಲಿಗೆಗೆ ಬಲಿಯಾಗಿದ್ದಾರೆ ಎಂದು ಅಲ್ಲಿನ ಸರ್ಕಾರ ತಿಳಿಸಿದೆ.
ನೈಜರ್ನಲ್ಲಿ ಒಣಹುಲ್ಲು ಮತ್ತು ಕಟ್ಟಿಗೆಗಳಿಂದ ನಿರ್ಮಾಣ ಮಾಡಿದ ಗುಡಿಸಲುಗಳನ್ನು ತಾತ್ಕಾಲಿಕ ಶಾಲೆಗಳನ್ನಾಗಿ ಬಳಸಲಾಗುತ್ತಿದೆ. ಇದರಲ್ಲೇ ತರಗತಿಗಳನ್ನು ನಡೆಸಲಾಗುತ್ತಿದೆ. ಶಾಲೆಯ ಮೂರು ಗುಡಿಸಲುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದರಿಂದ 26 ಮಕ್ಕಳು ಬೆಂಕಿಗೆ ಆಹುತಿಯಾಗಿದ್ದಾರೆ.
ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ ಎಂದು ಅಲ್ಲಿನ ಶಿಕ್ಷಣ ಇಲಾಖೆ ತಿಳಿಸಿದೆ.
ಏಪ್ರಿಲ್ನಲ್ಲಿ ಇದೇ ರೀತಿ ಹುಲ್ಲಿನ ಶಾಲೆಗೆ ಬಿಸಿಗಾಳಿಯಿಂದಾಗಿ ಬೆಂಕಿ ಹೊತ್ತಿಕೊಂಡು 20 ಮಕ್ಕಳನ್ನು ಬಲಿ ತೆಗೆದುಕೊಂಡಿತ್ತು. ಇದೀಗ ಮತ್ತೊಂದು ಘಟನೆ ನಡೆದಿದೆ.