ಕಿನ್ಶಾಸ್: ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ದೇಶದ ಗೊಮ ನಗರದಲ್ಲಿ 18 ಪ್ರಯಾಣಿಕರನ್ನ ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾಗಿದ್ದು, ಯಾವೊಬ್ಬ ಪ್ರಯಾಣಿಕರೂ ಬದುಕುಳಿದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬ್ಯುಸಿ ಬೀ ಎಂಬ ಸ್ಥಳೀಯ ಸಂಸ್ಥೆ ನಿರ್ವಹಿಸುತ್ತಿದ್ದ ಈ ವಿಮಾನವು ಬೆನಿ ನಗರಕ್ಕೆ ಹೊರಟಿತ್ತು. ಟೇಕಾಫ್ ಆಗುವ ವೇಳೆ ಅಪಘಾತಕ್ಕೀಡಾಗಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಅಗತ್ಯ ಸುರಕ್ಷತಾ ಕ್ರಮಗಳನ್ನ ಕೈಗೊಳ್ಳದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ವಿಮಾನ ಸಂಸ್ಥೆಯ ಕಳಪೆ ನಿರ್ವಹಣೆಯಿಂದಾಗಿ ಆಗಿಂದಾಗ್ಗೆ ವಿಮಾನ ಅಪಘಾತಗಳು ಸಂಭವಿಸುತ್ತಿವೆ. ಹಾಗಾಗಿ ಯುರೋಪಿಯನ್ ಒಕ್ಕೂಟದಲ್ಲಿ ಈ ವಿಮಾನಗಳ ಕಾರ್ಯನಿರ್ವಹಣೆಯನ್ನ ನಿಷೇಧಿಸಲಾಗಿದೆ.
ಅಕ್ಟೋಬರ್‌ನಲ್ಲಿ, ಇದೇ ವಿಮಾನ ನಿಲ್ದಾಣದಿಂದ ಹೊರಟಿದ್ದ ಸರಕು ವಿಮಾನ ಟೇಕಾಫ್ ಆದ ಒಂದು ಗಂಟೆಯ ನಂತರ ಅಪಘಾತಕ್ಕೀಡಾಗಿ, ಎಲ್ಲಾ ಎಂಟು ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದರು.