ಕ್ಯಾಲಿಫೋರ್ನಿಯಾ: ದಕ್ಷಿಣ ಕ್ಯಾಲಿಫೋರ್ನಿಯಾ ನಗರದ ವಸತಿ ಪ್ರದೇಶದಲ್ಲಿ ಸೋಮವಾರ ಲಘು ವಿಮಾನವೊಂದು ಅಪಘಾತಕ್ಕೀಡಾಗಿದ್ದು, ಎರಡು ಮನೆಗಳು ಮತ್ತು ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ.
ಸ್ಯಾನ್ ಡಿಯಾಗೋದ ಉಪನಗರವಾದ ಸಾಂಟಿಯಲ್ಲಿ ಮನೆಗಳ ಮೇಲೆ ವಿಮಾನ ಅಪ್ಪಳಿಸಿದ್ದರಿಂದ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹೊತ್ತಿ ಉರಿಯುತ್ತಿದ್ದ ಅಗ್ನಿಜ್ವಾಲೆಯನ್ನು ನಂದಿಸಿದ್ದಾರೆ. ಸ್ಥಳದಲ್ಲಿ ಡೆಲಿವರಿ ಟ್ರಕ್ ಕೂಡ ಸುಟ್ಟು ಕರಕಲಾಗಿದೆ.
ಅವಳಿ-ಎಂಜಿನ್ನ ಸೆಸ್ನಾ 340 ವಿಮಾನವು ಪತನವಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ಎಂದು ವರದಿ ಮಾಡಿವೆ. ಇದು ಆರು ಆಸನಗಳ ವಿಮಾನವಾಗಿದ್ದು, ಅರಿಜೋನಾದ ಯುಮಾದಿಂದ ಹೊರಟಿತ್ತು. ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಜನಪ್ರತಿನಿಧಿಗಳ ದೂರವಾಣಿ ಕರೆ ಸ್ವೀಕರಿಸದಿದ್ದರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಸರ್ಕಾರ ಎಚ್ಚರಿಕೆ