ವಾಷಿಂಗ್ಟನ್: ಭಾರತ ಹಾಗೂ ಪಾಕಿಸ್ತಾನ ಗಡಿಯಲ್ಲಿ ಸದ್ಯ ತಲ್ಲಣದ ವಾತಾವರಣ ನಿರ್ಮಾಣವಾಗಿದ್ದು, ಈ ಸಂಬಂಧ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟಾನಿಯೋ ಗುಟಾರೆಸ್ ಎಲ್ಲ ಬೆಳವಣಿಗೆಗಳನ್ನು ಗಮನಿಸುತ್ತಿದ್ದಾರೆ ಎಂದು ವಕ್ತಾರ ಸ್ಟೀಫನ್ ಡುಜರಿಕ್ ಹೇಳಿದ್ದಾರೆ.
ಉಭಯ ದೇಶಗಳ ಗಡಿ ಭಾಗದಲ್ಲಿ ತಲ್ಲಣದ ವಾತಾವರಣ ನಿರ್ಮಾಣವಾಗಿರುವುದು ನಮ್ಮೆಲ್ಲರ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಎರಡೂ ದೇಶಗಳು ಸಂಯಮದಿಂದ ಮುಂದುವರೆಯಬೇಕು ಎಂದು ಡುಜರಿಕ್ ಮನವಿ ಮಾಡಿದ್ದಾರೆ.
'ಕಾಶ್ಮೀರ ವಿಚಾರದಲ್ಲಿ ಅಮೆರಿಕ ಮಧ್ಯಸ್ಥಿಕೆ ಅಗತ್ಯ': ಭಾರತದ ನಡೆ ಖಂಡಿಸಿ ಅಫ್ರಿದಿ ಟ್ವೀಟ್
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಮೋದಿ ಸರ್ಕಾರ ರದ್ದು ಮಾಡಿದ ವಿಚಾರಕ್ಕೆ ಪ್ರತಿಕ್ರಿಯಿಸುವ ವೇಳೆ ಭಾರತ ಹಾಗೂ ಪಾಕಿಸ್ತಾನ ನಾಯಕರು ಶಾಂತಿ ಕಾಪಾಡಬೇಕು ಎಂದಿದ್ದಾರೆ.
ಉಭಯ ದೇಶಗಳು ಪರಿಸ್ಥಿತಿಯನ್ನು ವಿಕೋಪಕ್ಕೆ ತೆಗೆದುಕೊಂಡು ಹೋಗಬಾರದು ಮತ್ತು ಸಂಯಮ ಕಾಯ್ದುಕೊಳ್ಳಬೇಕು ಎಂದು ಡುಜರಿಕ್ ಹೇಳಿದ್ದಾರೆ.