ವಾಷಿಂಗ್ಟನ್ (ಯುಎಸ್): 1995 ರಲ್ಲಿ ಇರಾನ್ಗೆ ಸಂಬಂಧಿಸಿದಂತೆ ಘೋಷಿಸಿದ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಮತ್ತೊಂದು ವರ್ಷ ವಿಸ್ತರಿಸಿ ಯುಎಸ್ ಅಧ್ಯಕ್ಷ ಜೋ ಬೈಡನ್ ಆದೇಶಿಸಿದ್ದಾರೆ ಎಂದು ಶ್ವೇತಭವನ ಪ್ರಕಟಿಸಿದೆ.
ಹೌಸ್ ಸ್ಪೀಕರ್ ನ್ಯಾನ್ಸಿ ಪೆಲೋಸಿಗೆ ಬರೆದ ಪತ್ರದಲ್ಲಿ, ಇರಾನ್ಗೆ ಸಂಬಂಧಿಸಿದಂತೆ ಕಾರ್ಯನಿರ್ವಾಹಕ ಆದೇಶ 12957 ರಲ್ಲಿ ಘೋಷಿಸಲಾದ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಮುಂದುವರಿಸುವುದು ಮತ್ತು ಇರಾನ್ ವಿರುದ್ಧ ಸಮಗ್ರ ನಿರ್ಬಂಧಗಳನ್ನು ಜಾರಿಗೊಳಿಸುವುದು ಅಗತ್ಯವೆಂದು ನಾನು ನಿರ್ಧರಿಸಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: "ಅಮೆರಿಕವನ್ನ ಭಾರತೀಯ ಮೂಲದವರು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ": ಜೋ ಬೈಡನ್
ಇರಾನ್ ಸರ್ಕಾರದ ಕ್ರಮಗಳು ಮತ್ತು ನೀತಿಗಳು, ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ ಮತ್ತು ಅಮೆರಿಕದ ಆರ್ಥಿಕತೆಗೆ ಅಸಾಮಾನ್ಯ ಮತ್ತು ಅಸಾಧಾರಣ ಬೆದರಿಕೆಯನ್ನು ಒಡ್ಡುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.