ಒಟ್ಟಾವಾ(ಕೆನಡಾ) : ಪ್ರಧಾನಿ ಜಸ್ಟಿನ್ ಟ್ರುಡೊ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು, ಇಂದು(ಮಂಗಳವಾರ) ಬೆಳಗ್ಗೆ, ನಾನು ಕೋವಿಟ್ ಪರೀಕ್ಷೆ ಮಾಡಿಸಿದ್ದು, ವರದಿ ಪಾಸಿಟಿವ್ ಬಂದಿದೆ. ಸದ್ಯ ನಾನು ಆರೋಗ್ಯವಾಗಿದ್ದೇನೆ. ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ. ದಯವಿಟ್ಟು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಪ್ರಧಾನಿ ಜಸ್ಟಿನ್ ಟ್ರುಡೊ 2 ಡೋಸ್ ಕೋವಿಡ್ ಲಸಿಕೆ ಹಾಗೂ ಬೂಸ್ಟರ್ ಡೋಸ್ ಸಹ ಪಡೆದಿದ್ದಾರಂತೆ. ಆದರೂ ಸೋಂಕು ದೃಢಪಟ್ಟಿದೆ. ಅಲ್ಲದೇ ಅವರ ಮೂವರು ಮಕ್ಕಳಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.
ದೇಶದಲ್ಲಿ ಕೋವಿಡ್ ಲಸಿಕೆ ಕಡ್ಡಾಯ ವಿರುದ್ಧ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಲಸಿಕೆ ಆದೇಶಗಳನ್ನು ವಿರೋಧಿಸಿ ದೊಡ್ಡ ಪ್ರಮಾಣದ ಪ್ರತಿಭಟನೆಯು ಪಾರ್ಲಿಮೆಂಟ್ ಹಿಲ್‌ನಲ್ಲಿ ನಡೆಯುತ್ತಿದ್ದಂತೆ ಟ್ರುಡೊ ಕುಟುಂಬವನ್ನ ಬೇರೆಡೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: ದೇಶದಲ್ಲಿ 1,67,059 ಸೋಂಕಿತರು ಪತ್ತೆ, 1,192 ಮಂದಿ ಬಲಿ