ವಾಷಿಂಗ್ಟನ್: ಅಮೆರಿಕಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಸಾಮಾಜಿಕ ಅಂತರದ ಮಾರ್ಗಸೂಚಿಯನ್ನು ಏಪ್ರಿಲ್ 30ರ ವರೆಗೂ ವಿಸ್ತರಿಸಲಾಗಿದೆ.
-
COVID-19: Trump extends social distancing guidelines till April 30
— ANI Digital (@ani_digital) March 30, 2020 " class="align-text-top noRightClick twitterSection" data="
Read @ANI story | https://t.co/44fFOspyMJ pic.twitter.com/YU7Y7SRAz4
">COVID-19: Trump extends social distancing guidelines till April 30
— ANI Digital (@ani_digital) March 30, 2020
Read @ANI story | https://t.co/44fFOspyMJ pic.twitter.com/YU7Y7SRAz4COVID-19: Trump extends social distancing guidelines till April 30
— ANI Digital (@ani_digital) March 30, 2020
Read @ANI story | https://t.co/44fFOspyMJ pic.twitter.com/YU7Y7SRAz4
ನೀವು ಎಷ್ಟು ಪರಿಣಾಮಕಾರಿಯಾಗಿ ಈ ಸಾಮಾಜಿಕ ಅಂತರವನ್ನು ಅನುಸರಿಸುತ್ತೀರೋ ಈ ಮಹಾಮಾರಿಯನ್ನು ಅಷ್ಟೇ ವೇಗವಾಗಿ ಅಂತ್ಯಗೊಳಿಸಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಬಗ್ಗೆ ಶ್ವೇತಭವನದಲ್ಲಿ ಮಾತನಾಡಿದ ಅವರು, ಕೊರೊನಾ ಹರಡುವಿಕೆಯನ್ನು ಕಡಿಮೆ ಮಾಡುವ ಸಲುವಾಗಿ ಸಾಮಾಜಿಕ ಅಂತರದ ಮಾರ್ಗಸೂಚಿಯನ್ನು ಏಪ್ರಿಲ್ 30ರ ವರೆಗೆ ವಿಸ್ತರಿಸಲಾಗುತ್ತದೆ ಎಂದಿದ್ದಾರೆ.
ಮುಂದಿನ ಎರಡು ವಾರಗಳಲ್ಲಿ ಕೋವಿಡ್-19 ನಿಂದ ಉಂಟಾಗುವ ಸಾವು-ನೋವುಗಳ ಸಂಖ್ಯೆಯಲ್ಲಿ ಅಮೆರಿಕ ಗರಿಷ್ಠ ಮಟ್ಟವನ್ನು ಕಾಣಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಪತ್ರಕರ್ತರೊಬ್ಬರು ಕೊರೊನಾ ಸೋಂಕಿನಿಂದ ಸಾವಿಗೀಡಾದವರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಸ್ಟರ್ (ಏಪ್ರಿಲ್ 12) ವರೆಗೆ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ಪ್ರಕಾರ, ಕೋವಿಡ್-19ನಿಂದ ಅಮೆರಿಕದಲ್ಲಿ 2,400ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.