ETV Bharat / international

ಅಪಾರ್ಟ್​ಮೆಂಟ್​ನಲ್ಲಿ ಅಗ್ನಿ ಅವಘಡ: ಎಂಟು ಮಂದಿಗೆ ಗಾಯ

author img

By

Published : Sep 30, 2021, 6:29 AM IST

ದಕ್ಷಿಣ ಡಲ್ಲಾಸ್​ನ ಅಪಾರ್ಟ್​ಮೆಂಟ್​ವೊಂದರಲ್ಲಿ ಸಂಭವಿಸಿದ ಸ್ಫೋಟದಿಂದ ಒಟ್ಟು 8 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

explosion
ಅಗ್ನಿ ಅವಘಡ

ಡಲ್ಲಾಸ್( ಅಮೆರಿಕ): ದಕ್ಷಿಣ ಡಲ್ಲಾಸ್​ನ ಅಪಾರ್ಟ್​ಮೆಂಟ್​ವೊಂದರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಅಗ್ನಿಶಾಮಕ ಸಿಬ್ಬಂದಿ ಸೇರಿದಂತೆ ಒಟ್ಟು ಎಂಟು ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಎರಡು ಅಂತಸ್ತಿನ ಕಟ್ಟಡದಲ್ಲಿ ನೈಸರ್ಗಿಕ ಅನಿಲ ಸೋರಿಕೆ ವರದಿ ಕುರಿತು ತನಿಖೆ ಮಾಡುತ್ತಿದ್ದರು. ಈ ವೇಳೆ, ಸ್ಫೋಟ ಸಂಭವಿಸಿದೆ ಎಂದು ಡಲ್ಲಾಸ್ ಅಗ್ನಿಶಾಮಕ ರಕ್ಷಣಾ ಇಲಾಖೆ ತಿಳಿಸಿದೆ.

ಇನ್ನು ಸ್ಫೋಟಕ್ಕೆ ಮೂಲ ಕಾರಣ ತಿಳಿದು ಬಂದಿಲ್ಲ. ದುರಂತದಿಂದ ಒಟ್ಟು 8 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.