ETV Bharat / international

ಕಾಳ್ಗಿಚ್ಚಿಗೆ ತತ್ತರಿಸಿದ ಕ್ಯಾಲಿಫೋರ್ನಿಯಾ: ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸ

ದಕ್ಷಿಣ ಕ್ಯಾಲಿಫೋರ್ನಿಯಾದ ಚೆರ್ರಿ ಕಣಿವೆಯಲ್ಲಿ 4,125 ಎಕರೆ ಪ್ರದೇಶವನ್ನು ಆವರಿಸಿರುವ ಕಾಳ್ಗಿಚ್ಚು ನಂದಿಸಲು ಅಗ್ನಿಶಾಮಕದ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದೆ. ವಿಮಾನದ ಮೂಲಕವೂ ಬೆಂಕಿ ಹತೋಟಿಗೆ ತರಲು ಪ್ರಯತ್ನಿಸಲಾಗುತ್ತಿದೆ.

Firefighters battle to contain California wildfire
ಚೆರ್ರಿ ಕಣಿವೆಯಲ್ಲಿ ಕಾಳ್ಗಿಚ್ಚು
author img

By

Published : Aug 2, 2020, 1:29 PM IST

ಚೆರ್ರಿ ಕಣಿವೆ (ಕ್ಯಾಲಿಫೋರ್ನಿಯಾ): ಕೊರೊನಾ ಆರ್ಭಟಕ್ಕೆ ತತ್ತರಿಸಿರುವ ಅಮೆರಿಕದಲ್ಲಿ ಈಗ ಕಾಳ್ಗಿಚ್ಚು ಅಬ್ಬರಿಸುತ್ತಿದೆ. ದಕ್ಷಿಣ ಕ್ಯಾಲಿಫೋರ್ನಿಯಾದ ಚೆರ್ರಿ ಕಣಿವೆಯಲ್ಲಿ ಸಂಭವಿಸಿರುವ ಕಾಳ್ಗಿಚ್ಚು ನಂದಿಸಲು ಅಗ್ನಿಶಾಮಕದ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಚೆರ್ರಿ ಕಣಿವೆಯಲ್ಲಿ ಕಾಳ್ಗಿಚ್ಚು ನಂದಿಸಲು ಅಗ್ನಿಶಾಮಕ ದಳ ಹರಸಾಹಸ

ಶುಕ್ರವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಹತ್ತಿದ ಬೆಂಕಿಯು 4,125 ಎಕರೆ ಪ್ರದೇಶವನ್ನು ಆವರಿಸಿದೆ. ಚೆರ್ರಿ ಕಣಿವೆ ಪ್ರದೇಶದಲ್ಲಿದ್ದ ಸುಮಾರು 200 ಮನೆಗಳಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದು, ವಿಮಾನದ ಮೂಲಕವೂ ಬೆಂಕಿ ಹತೋಟಿಗೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ರಿವರ್ಸೈಡ್ ಕೌಂಟಿ ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದೆ.

ಈ ಹಿಂದೆ ಕೂಡ ಅಮೆರಿಕದ ಫ್ಲೋರಿಡಾ ಹಾಗೂ ಅರಿಜೋನಾದಲ್ಲಿ ಸಂಭವಿಸಿದ್ದ ಕಾಳ್ಗಿಚ್ಚಿನಲ್ಲಿ ಅಪಾರ ಪ್ರಮಾಣದ ಅರಣ್ಯ ನಾಶವಾಗಿದ್ದು, ಅನೇಕ ಜೀವರಾಶಿಗಳು ಬಲಿಯಾಗಿದ್ದವು. ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.