ಹೈದರಾಬಾದ್: ವಿಶ್ವದಾದ್ಯಂತ 3,27,58,988ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿದ್ದು, 9,93,435ಕ್ಕೂ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದಾರೆ. ಈವರೆಗೆ 2,41,73,025ಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದಾರೆ.
72,44,184ಕ್ಕೂ ಹೆಚ್ಚು ಪ್ರಕರಣಗಳನ್ನು ಹೊಂದಿರುವ ಯುಎಸ್ ಅತಿ ಹೆಚ್ಚು ಸೋಂಕಿತರನ್ನು ಹೊಂದಿದ ರಾಷ್ಟ್ರವಾಗಿದೆ. ಯುಎಸ್ನಲ್ಲಿ ರೆಸ್ಟೋರೆಂಟ್ಗಳು, ಕಾಲುದಾರಿಗಳು ಮತ್ತು ಪಾರ್ಕಿಂಗ್ ಸ್ಥಳಗಳಲ್ಲಿ ಕುಳಿತುಕೊಳ್ಳಲು ಅವಕಾಶ ನೀಡಲಾಗುತ್ತಿದೆ. ಯುಎಸ್ನಲ್ಲಿ ಕೊರೊನಾದಿಂದಾಗಿ 208,440 ಸಾವು ಸಂಭವಿಸಿದ್ದು, 4,480,719 ಜನ ಚೇತರಿಸಿಕೊಂಡಿದ್ದಾರೆ.

ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ದೇಶಗಳ ಪೈಕಿ ಭಾರತ ಎರಡನೇ ಸ್ಥಾನದಲ್ಲಿದೆ. 59,01,571 ಜನ ಕೊರೊನಾ ವೈರಸ್ಗೆ ತುತ್ತಾಗಿದ್ದು, 93,410ಕ್ಕಿಂತಲೂ ಹೆಚ್ಚು ಸೋಂಕಿತರು ಮೃತಪಟ್ಟಿದ್ದಾರೆ. 4,849,584 ಮಂದಿ ಗುಣಮುಖರಾಗಿದ್ದಾರೆ.
ಬ್ರೆಜಿಲ್ ಮೂರನೇ ಸ್ಥಾನದಲ್ಲಿದ್ದು, ಈವರೆಗೆ 4,692,579 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. 140,709 ಸೋಂಕಿತರು ಮೃತಪಟ್ಟಿದ್ದು, 4,040,949 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ, ಯುಕೆಯಲ್ಲಿ ಹಲವಾರು ಪ್ರದೇಶಗಳಲ್ಲಿ ಕಠಿಣ ನಿರ್ಬಂಧಗಳನ್ನು ಘೋಷಿಸಲಾಗಿದೆ. ಯುಕೆಯಲ್ಲಿ 1,136,048 ಕೊರೊನಾ ಸೋಂಕಿತರು ದೃಢಪಟ್ಟಿದ್ದು, 934,146 ಜನ ಗುಣಮುಖರಾಗಿದ್ದಾರೆ. 20,056 ಸೋಂಕಿತರು ಮೃತಪಟ್ಟಿದ್ದಾರೆ.