ETV Bharat / international

ರಷ್ಯಾ ವಿರುದ್ಧದ ಖಂಡನಾ ನಿರ್ಣಯದ ಮತದಾನದಿಂದ ದೂರ ಉಳಿದ ಭಾರತ, ಚೀನಾ

ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿದ್ದು, ರಷ್ಯಾದ ಆಕ್ರಮಣಾಕಾರಿ ನೀತಿಯನ್ನು ಖಂಡಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಲಾಗಿದ್ದ ನಿರ್ಣಯದಲ್ಲಿ ಮತ ಚಲಾಯಿಸುವುದರಿಂದ ಭಾರತ ದೂರ ಉಳಿದಿದೆ.

India abstains from UN vote that condemns Russia's 'aggression' against Ukraine
ರಷ್ಯಾ ವಿರುದ್ಧ ಖಂಡನೆ ನಿರ್ಣಯದ ಮತದಾನದಿಂದ ದೂರ ಉಳಿದ ಭಾರತ, ಚೀನಾ
author img

By

Published : Feb 26, 2022, 6:48 AM IST

ನವದೆಹಲಿ: ಉಕ್ರೇನ್‌ ವಿರುದ್ಧ ರಷ್ಯಾ ನಡೆಸುತ್ತಿರುವ ಆಕ್ರಮಣವನ್ನು ಖಂಡಿಸುವ ವಿಚಾರಕ್ಕೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಂಡಿಸಿದ್ದ ನಿರ್ಣಯದಲ್ಲಿ ಮತದಾನಕ್ಕೆ ಭಾರತ ಶನಿವಾರ ಗೈರು ಹಾಜರಾಗಿದೆ. ನಿರೀಕ್ಷೆಯಂತೆ ಚೀನಾ ಕೂಡಾ ರಷ್ಯಾದ ವಿರುದ್ಧ ಮತದಾನದಿಂದ ದೂರ ಉಳಿದಿದೆ.

ಯುಎನ್‌ಎಸ್‌ಸಿ ಸಭೆಯಲ್ಲಿ ಭಾಗವಹಿಸಿದ್ದ ಭಾರತ ಹಿಂಸಾಚಾರ ಮತ್ತು ದ್ವೇಷವನ್ನು ತಕ್ಷಣವೇ ನಿಲ್ಲಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಬೇಕೆಂದು ಭಾರತವು ಒತ್ತಾಯಿಸಿದ್ದು, ವಿವಾದಗಳನ್ನು ಇತ್ಯರ್ಥ ಮಾಡಲು ಮಾತುಕತೆಯೊಂದೇ ದಾರಿ ಎಂದಿದೆ.

ವಿಶ್ವಸಂಸ್ಥೆಯಲ್ಲಿ ಭಾರತ ಕಾಯಂ ಪ್ರತಿನಿಧಿಯಾದ ಟಿ ಎಸ್​ ತಿರುಮೂರ್ತಿ ಮಾತನಾಡಿ, ಉಕ್ರೇನ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಭಾರತವು ವಿಚಲಿತವಾಗಿದೆ. ವಿಶ್ವಸಂಸ್ಥೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಉತ್ತಮ ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ. ಭಿನ್ನಾಭಿಪ್ರಾಯಗಳು ಮತ್ತು ವಿವಾದಗಳನ್ನು ಇತ್ಯರ್ಥಗೊಳಿಸಲು ಮಾತುಕತೆಯೊಂದೇ ಉತ್ತರವಾಗಿದೆ ಎಂದು ಹೇಳಿದ್ದಾರೆ.

ರಷ್ಯಾ ಮತ್ತು ಉಕ್ರೇನ್ ವಿಚಾರದಲ್ಲಿ ರಾಜತಾಂತ್ರಿಕ ಮಾತುಕತೆಯ ಮಾರ್ಗವನ್ನು ಕೈಬಿಟ್ಟಿರುವುದು ವಿಷಾದದ ಸಂಗತಿಯಾಗಿದೆ. ನಾವು ರಾಜತಾಂತ್ರಿಕ ಮಾರ್ಗವನ್ನು ಆಯ್ದುಕೊಳ್ಳಬೇಕು. ಈ ಎಲ್ಲಾ ಕಾರಣಗಳಿಗಾಗಿ, ಭಾರತವು ಈ ನಿರ್ಣಯದಿಂದ ದೂರವಿರಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: 'ಅಧಿಕಾರ ನಿಮ್ಮ ಕೈಗೆ ತೆಗೆದುಕೊಳ್ಳಿ '; ಉಕ್ರೇನ್​ ಯೋಧರಿಗೆ ಕರೆ ನೀಡಿದ ರಷ್ಯಾ ಅಧ್ಯಕ್ಷ ಪುಟಿನ್​!

ಭಾರತೀಯ ಸಮುದಾಯದ ಬಗ್ಗೆ ಕಳವಳ: ಉಕ್ರೇನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯ ವಿದ್ಯಾರ್ಥಿಗಳಿದ್ದು, ಅವರನ್ನು ಒಳಗೊಂಡ ಭಾರತೀಯ ಸಮುದಾಯದ ಸುರಕ್ಷತೆಯ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ಉಕ್ರೇನ್​ನಲ್ಲಿರುವ ಸುಮಾರು 16 ಸಾವಿರ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರಧಾನಮಂತ್ರಿ ಕಚೇರಿ ಹೇಳಿದೆ.

ಯುನೈಟೆಡ್​ ಅರಬ್ ಎಮಿರೇಟ್ಸ್​(ಯುಎಇ)​ ಸಹ ರಷ್ಯಾ ವಿರುದ್ಧದ ಮತದಾನದಿಂದ ಹಿಂದೆ ಸರಿದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.