ETV Bharat / international

ಉಕ್ರೇನ್​​​​ ಪರಮಾಣು ಕೇಂದ್ರಗಳ ಸುರಕ್ಷತೆ ಬಗ್ಗೆ ಭಾರತ ಕಳವಳ..! - United Nations on war

ಪರಮಾಣು ಕೇಂದ್ರದ ಮೇಲೆ ರಷ್ಯಾದ ದಾಳಿಯ ನಂತರ, ಪರಮಾಣು ಸ್ಥಾವರಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಹೆಚ್ಚು ಒತ್ತು ನೀಡುವುದಾಗಿ ವಿಶ್ವಸಂಸ್ಥೆಯಲ್ಲಿ ಭಾರತ ಶುಕ್ರವಾರ ಹೇಳಿದೆ. ಅಲ್ಲಿನ ಪರಿಸ್ಥಿತಿಯು ಮತ್ತಷ್ಟು ಹದಗೆಟ್ಟಿದೆ ಎಂದು ವಿಷಾದಿಸಿದೆ.

India says it attaches 'highest importance' to nuclear safety in Ukraine
ಪರಮಾಣು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲು ಭಾರತ ಬದ್ಧ
author img

By

Published : Mar 5, 2022, 6:54 AM IST

ವಿಶ್ವಸಂಸ್ಥೆ: ಉಕ್ರೇನ್​ ಮೇಲೆ ರಷ್ಯಾ ಆಕ್ರಮಣ ಮುಂದುವರಿದಿದ್ದು, ಸಾವು ನೋವಿನ ಪ್ರಕರಣಗಳು ಹೆಚ್ಚಿವೆ. ಯುರೋಪಿನಲ್ಲೇ ಅತ್ಯಂತ ದೊಡ್ಡ ಅಣು ಸ್ಥಾವರವಾದ ಝಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಶುಕ್ರವಾರದಂದು ರಷ್ಯಾ ಪಡೆಗಳು ದಾಳಿ ನಡೆಸಿದ್ದು, ಈ ಬಗ್ಗೆ ಭಾರತ ತೀವ್ರ ವಿಷಾದ ವ್ಯಕ್ತಪಡಿಸಿದೆ.

ಉಕ್ರೇನ್​​ ಪಡೆಗಳು ಮತ್ತು ರಷ್ಯಾದ ಪಡೆಗಳ ನಡುವೆ ಭೀಕರ ಹೋರಾಟ ನಡೆದಿದೆ ಎಂದು ಎನರ್‌ಗೋಡರ್‌ನ ಮೇಯರ್ ಡಿಮಿಟ್ರೋ ಓರ್ಲೋವ್ ಆನ್‌ಲೈನ್ ಪೋಸ್ಟ್‌ವೊಂದರಲ್ಲಿ ನಿನ್ನೆ ಮಾಹಿತಿ ನೀಡಿದ್ದಾರೆ. ಈ ದಾಳಿಯಲ್ಲಾದ ಅಪಾರ ಸಾವು ನೋವಿನ ಬಗ್ಗೆಯೂ ತಿಳಿಸಿದ್ದಾರೆ. ಇದಕ್ಕೂ ಮೊದಲು ರಷ್ಯಾ ಪಡೆಗಳು ಪರಮಾಣು ಸ್ಥಾವರ ವಶಪಡಿಸಿಕೊಳ್ಳಲು ಹವಣಿಸುತ್ತಿದೆ ಎಂದು ವರದಿಯಾಗಿತ್ತು. ಇದಕ್ಕಾಗಿ ರಷ್ಯಾ ಪಡೆಗಳು ಟ್ಯಾಂಕ್​​​​ಗಳೊಂದಿಗೆ ಝಪೋರಿಝಿಯಾ ಪ್ರವೇಶಿಸಿವೆ ಎಂದು ಹೇಳಲಾಗಿತ್ತು. ಅದರಂತೆ ನಿನ್ನೆ ಝಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ತೀವ್ರ ಶೆಲ್​​ ದಾಳಿ ನಡೆಸಿ ಅದನ್ನು ಧ್ವಂಸಗೊಳಿಸಿದ್ದು, ಅಮೆರಿಕ ಸೇರಿ ಅನೇಕ ರಾಷ್ಟ್ರಗಳು ತೀವ್ರವಾಗಿ ಖಂಡಿಸಿದೆ.

ಪರಮಾಣು ಕೇಂದ್ರದ ಮೇಲೆ ರಷ್ಯಾದ ದಾಳಿಯ ನಂತರ, ಪರಮಾಣು ಸ್ಥಾವರಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಹೆಚ್ಚು ಒತ್ತು ನೀಡುವುದಾಗಿ ವಿಶ್ವಸಂಸ್ಥೆಯಲ್ಲಿ ಭಾರತ ಶುಕ್ರವಾರ ಹೇಳಿದೆ. ಅಲ್ಲಿನ ಪರಿಸ್ಥಿತಿಯು ಮತ್ತಷ್ಟು ಹದಗೆಟ್ಟಿದೆ ಎಂದು ಇದೇ ವೇಳೆ ವಿಷಾದಿಸಿದೆ.

ಪರಮಾಣು ಕೇಂದ್ರಗಳ ಮೇಲಿನ ದಾಳಿಯಿಂದಾಗುವ ಅಪಾಯದ ಕುರಿತು ಭದ್ರತಾ ಮಂಡಳಿಯ ತುರ್ತು ಸಭೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ, ಯಾವುದೇ ಅಪಘಾತವನ್ನು ಒಳಗೊಂಡಂತೆ ಪರಮಾಣು ಸೌಲಭ್ಯಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಭಾರತವು ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಪರಮಾಣು ಸೌಲಭ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ತೀವ್ರ ಪರಿಣಾಮಗಳನ್ನು ಉಂಟುಮಾಡಬಹುದು. ಉಕ್ರೇನ್‌ನ ಪರಮಾಣು ಕೇಂದ್ರ ಸೌಲಭ್ಯಗಳ ಸುರಕ್ಷತೆ ಮತ್ತು ಭದ್ರತೆಗೆ ಸಂಬಂಧಿಸಿದ ಬೆಳವಣಿಗೆಗಳನ್ನು ನಾವು ಎಚ್ಚರಿಕೆಯಿಂದ ಗಮನಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಉಕ್ರೇನ್​ - ರಷ್ಯಾ ಪಡೆಗಳ ಭೀಕರ ಕಾಳಗ.. ಹೊತ್ತಿ ಉರಿಯುತ್ತಿರುವ ಜಪೋರಿಝಿಯಾ ಪರಮಾಣು ವಿದ್ಯುತ್ ಸ್ಥಾವರ

ಎರಡನೆಯ ಮಹಾಯುದ್ಧದ ನಂತರ ಯೂರೋಪಿಯನ್ ರಾಜ್ಯದ ಮೇಲೆ ನಡೆದ ಅತಿ ದೊಡ್ಡ ದಾಳಿ ಇದಾಗಿದ್ದು, ಸಾವಿರಾರು ಜನರು ಪ್ರಾಣಕಳೆದುಕೊಂಡಿದ್ದಾರೆ. ಇನ್ನು ಅಪಾರ ಪ್ರಮಾಣದಲ್ಲಿ ಜನ ಗಾಯಗೊಂಡಿದ್ದಾರೆ. ಲಕ್ಷಾಂತರ ಜನ ಈ ದಾಳಿಯಿಂದ ಸಂತ್ರಸ್ತರಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.