ವಾಷಿಂಗ್ಟನ್(ಅಮೆರಿಕ): ಭಾರತ 73ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ಹಿನ್ನೆಲೆಯಲ್ಲಿ ಅಮೆರಿಕ ಭಾರತದ ನಾಗರಿಕರಿಗೆ ಶುಭಾಶಯ ಕೋರಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಎರಡೂ ರಾಷ್ಟ್ರಗಳು ಜವಾಬ್ದಾರಿಯನ್ನು ಹಂಚಿಕೊಂಡಿವೆ ಎಂದು ಅಭಿಪ್ರಾಯಪಟ್ಟಿದೆ.
ಭಾರತದ ಸಂವಿಧಾನವನ್ನು ಅಂಗೀಕರಿಸಿದ ದಿನವಾದ ಗಣರಾಜ್ಯೋತ್ಸವವನ್ನು ಗೌರವಿಸುತ್ತೇವೆ. ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದೊಂದಿಗೆ ಈ ಸಮಯದಲ್ಲಿ ಜೊತೆಯಲ್ಲಿರುತ್ತೇವೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಸಾಕಿ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನಕ್ಕೆ ಭೇಟಿ ನೀಡಿದಾಗ ಅಧ್ಯಕ್ಷ ಜೋ ಬೈಡನ್ 'ಭಾರತ ಮತ್ತು ಅಮೆರಿಕ ನಡುವಿನ ಸಂಬಂಧವು ಮತ್ತಷ್ಟು ಗಟ್ಟಿಯಾಗಿಸಲು ಉದ್ದೇಶಿಸಲಾಗಿದೆ. ಈ ಮೂಲಕ ಜಗತ್ತಿಗೇ ಒಳಿತಾಗಲಿದೆ ಎಂದಿದ್ದರು' ಎಂದು ಜೆನ್ ಸಾಕಿ ನೆನಪಿಸಿದ್ದಾರೆ.
ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ನಮ್ಮ ಹಂಚಿಕೆಯ ಜವಾಬ್ದಾರಿಯಲ್ಲಿ ಎರಡೂ ರಾಷ್ಟ್ರಗಳ ಪಾಲುದಾರಿಕೆ ಬೇರೂರಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರವಾಗಿ ಜೆನ್ ಸಾಕಿ ಹೇಳಿದ್ದಾರೆ. ಯುಎಸ್ ಸ್ಟೇಟ್ ಡಿಪಾರ್ಟ್‌ಮೆಂಟ್‌ನ ದಕ್ಷಿಣ ಮತ್ತು ಮಧ್ಯ ಏಷ್ಯಾ ಬ್ಯೂರೋ ಕೂಡಾ ಟ್ವೀಟ್ ಮಾಡಿದ್ದು, 'ಭಾರತದ 73ನೇ ಗಣರಾಜ್ಯೋತ್ಸವದ ಶುಭಾಶಯಗಳು. ಕೋಟ್ಯಂತರ ಭಾರತೀಯರು ಈ ದಿನವನ್ನು ಆಚರಿಸುತ್ತಿದ್ದಾರೆ. ಎರಡೂ ರಾಷ್ಟ್ರಗಳ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ಎರಡೂ ರಾಷ್ಟ್ರಗಳ ಸಹಕಾರವನ್ನು ನಾವು ಈ ವೇಳೆ ನೆನಪಿಸಿಕೊಳ್ಳುತ್ತೇವೆ' ಎಂದಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಅಮೆರಿಕನ್ ಕಾಂಗ್ರೆಸ್ ಸದಸ್ಯನ ಶುಭಾಶಯ: ಭಾರತ ಮತ್ತು ಅಮೆರಿಕ ಎರಡೂ ರಾಷ್ಟ್ರಗಳು ವಿಶ್ವದ ಅತ್ಯಂತ ಹಳೆಯ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಗಳನ್ನು ರೂಪಿಸುತ್ತವೆ. ನಮ್ಮ ಪಾಲುದಾರಿಕೆ, ಪ್ರಜಾಪ್ರಭುತ್ವದಲ್ಲಿ ನಂಬಿಕೆ, ಮಾನವೀಯತೆ, ಮಾನವ ಹಕ್ಕುಗಳ ವಿಚಾರದಲ್ಲಿ ಪ್ರಪಂಚದಾದ್ಯಂತ ನಮ್ಮ ಪಾಲುದಾರಿಕೆ ತುಂಬಾ ವಿಶೇಷವಾಗಿದೆ ಎಂದು ಕಾಂಗ್ರೆಸ್ ಸದಸ್ಯ ಎರಿಕ್ ಸ್ವಾಲ್ವೆಲ್ ಹೇಳಿದ್ದಾರೆ.
ಅಮೆರಿಕದಲ್ಲಿ ಸಿದ್ಧತೆ: ಅಮೆರಿಕದಲ್ಲಿ ಇಂಡೋ- ಅಮೆರಿಕನ್ನರು ಗಣರಾಜ್ಯೋತ್ಸವವನ್ನು ಆಚರಿಸಲು ವಿಶೇಷ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಕೋವಿಡ್ ಕಾರಣದಿಂದಾಗಿ ಅಮೆರಿಕದ ಭಾರತೀಯ ರಾಯಭಾರಿ ಕಚೇರಿಯ ಮುಂದೆ ಭಾರತೀಯ ರಾಯಭಾರಿ ತರಂಜಿತ್ ಸಿಂಗ್ ಸಂಧು ಕೆಲವರೊಂದಿಗೆ ರಾಷ್ಟ್ರಧ್ವಜವನ್ನು ಹಾರಿಸಿ, ಗಣರಾಜ್ಯೋತ್ಸವ ಆಚರಣೆ ಮಾಡಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಫುಟ್ಬಾಲ್ ವೀಕ್ಷಣೆಗೆ ಬಂದಿದ್ದ ವೇಳೆ ಕಾಲ್ತುಳಿತ.. 6 ಅಭಿಮಾನಿಗಳು ಸಾವು, 40 ಜನರಿಗೆ ಗಾಯ