ETV Bharat / international

ಗಡಿ ನಿಯಂತ್ರಣ ರೇಖೆಯಲ್ಲಿ ಶಾಂತಿ ಕಾಪಾಡುವಂತೆ ಅಮೆರಿಕ ಕರೆ - ಆಮೇರಿಕಾ ಆಧ್ಯಕ್ಷ ಡೋನಾಲ್ಡ್ ಟ್ರಂಪ್

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ  ರದ್ದುಪಡಿಸಿರುವ  ಕೇಂದ್ರದ  ನಿಲುವಿನ ಬಗ್ಗೆ ಅಮೆರಿಕ ಪ್ರತಿಕ್ರಿಯಿಸಿದ್ದು, ಕಾಶ್ಮೀರದಲ್ಲಿ ಮಾನವ ಹಕ್ಕುಗಳನ್ನು ಗೌರವಿಸುವಂತೆ ಮತ್ತು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶಾಂತಿ ಕಾಪಾಡುವಂತೆ ಕರೆ ನೀಡಿದೆ.

ಜಮ್ಮು ಕಾಶ್ಮೀರ  ವಿಶೇಷ  ಸ್ಥಾನಮಾನ ರದ್ದು: ಗಡಿ ನಿಯಂತ್ರಣ ರೇಖೆಯಲ್ಲಿ ಶಾಂತಿ ಕಾಪಾಡುವಂತೆ ಅಮೇರಿಕಾ ಕರೆ
author img

By

Published : Aug 6, 2019, 12:07 PM IST

ವಾಷಿಂಗ್ಟನ್: ಜಮ್ಮುಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದು ಪಡಿಸಿದ್ದು ಈ ಬಗ್ಗೆ ಅಮೆರಿಕ ಪ್ರತಿಕ್ರಿಯಿಸಿದೆ. ಕಾಶ್ಮೀರದಲ್ಲಿ ಮಾನವ ಹಕ್ಕುಗಳನ್ನು ಗೌರವಿಸುವಂತೆ ಮತ್ತು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶಾಂತಿ ಕಾಪಾಡಿಕೊಳ್ಳುವಂತೆ ಕರೆ ನೀಡಿದೆ.

ನಾವು ಜನರ ವೈಯುಕ್ತಿಕ ಹಕ್ಕುಗಳನ್ನು ಗೌರವಿಸುತ್ತೇವೆ. ಆದ್ದರಿಂದ ಕಾಶ್ಮೀರ ವಿಷಯದಲ್ಲಿ ಕೇಂದ್ರ ಸರ್ಕಾರ ಅಲ್ಲಿನ ಜನರೊಂದಿಗೆ ಚರ್ಚಿಸಬೇಕು ಎಂದು ಅಮೆರಿಕ ರಾಜ್ಯ ಇಲಾಖೆಯ ವಕ್ತಾರ ಮೋರ್ಗನ್ ಒರ್ಟಾಗಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

370 ನೇ ವಿಧಿ ರದ್ದತಿಯ ಘೋಷಣೆ ಮಾಡುವುದಕ್ಕಿಂತ ಮುಂಚೆ ಕಾಶ್ಮೀರದ ಇಬ್ಬರೂ ಮಾಜಿ ಮುಖ್ಯಮಂತ್ರಿಗಳು ಮತ್ತು ರಾಜ್ಯದ ಪ್ರಮುಖ ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಈ ಬೆಳವಣಿಗೆಗಳನ್ನು ನಾವು ಗಮನಿಸಿದ್ದೇವೆ. ಆದ್ದರಿಂದ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಶಾಂತಿ ಮತ್ತು ಸ್ಥಿರತೆಯನ್ನು ಕಾಪಾಡಿಕೊಳ್ಳಲು ನಾವು ಎಲ್ಲಾ ಪಕ್ಷಗಳಿಗೆ ಕರೆ ನೀಡುತ್ತೇವೆ ಎಂದು ಒರ್ಟಾಗಸ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಅಮೆರಿಕ ಸದಾ ಗಮನ ಹರಿಸುತ್ತಿದೆ. ವಿಶೇಷ ಸ್ಥಾನಮಾನ ರದ್ದು ಪಡಿಸುವ ಮೂಲಕ ಭಾರತ ದೇಶದ ಆಂತರಿಕ ವಿಷಯದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದೆ. ಕಳೆದ ಬಾರಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಜೊತೆ ನಡೆದ ಸಭೆಯಲ್ಲಿ, ಕಾಶ್ಮೀರ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡುವಂತೆ ಪ್ರಧಾನಿ ಮೋದಿ ಅಧ್ಯಕ್ಷ ಟ್ರಂಪ್‌ನ್ನು ಕೇಳಿಕೊಂಡಿದ್ದಾರೆ ಒರ್ಟಾಗಸ್ ತಿಳಿಸಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.