ಹೂಸ್ಟನ್: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 22 ರಂದು ಹೂಸ್ಟನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹ ಆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ವಿಷಯವನ್ನ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಪ್ರಕಟಣೆಯಲ್ಲಿ ಅಧಿಕೃತವಾಗಿ ಹೇಳಿದ್ದಾರೆ. ಹೂಸ್ಟನ್ಗೆ ಪ್ರಯಾಣ ಬೆಳಸಲಿರುವ ಟ್ರಂಪ್ ಟೆಕ್ಸಾಸ್, ವಾಪಕೋನೆಟಾ, ಓಹಿಯೋಗೂ ಭೇಟಿ ನೀಡಲಿದ್ದಾರೆ. ಈ ವೇಳೆ, ಅಮೆರಿಕ, ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ಶ್ವೇತ ಭವನದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.