ವಾಷಿಂಗ್ಟನ್: ಇತ್ತೀಚೆಗೆ ಭಾರತದಿಂದ ಉಡಾವಣೆಯಾದ ಕ್ಷಿಪಣಿಯು ಪಾಕಿಸ್ತಾನಕ್ಕೆ ಬಂದಿಳಿದಿರುವುದು ಆಕಸ್ಮಿಕವೇ ಹೊರತು ಬೇರೇನೂ ಇಲ್ಲ ಎಂದು ಅಮೆರಿಕ ಹೇಳಿದೆ.
ಕೆಲ ದಿನಗಳ ಹಿಂದೆ ಪಾಕಿಸ್ತಾನದಲ್ಲಿ ಬಂದಿಳಿದ ಕ್ಷಿಪಣಿಯನ್ನು ಆಕಸ್ಮಿಕವಾಗಿ ಹಾರಿಸಿರುವುದಾಗಿ ಭಾರತ ಶುಕ್ರವಾರ ಹೇಳಿದೆ. ಅಷ್ಟೇ ಅಲ್ಲದೇ ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಈ ಘಟನೆಯು ತನ್ನ ನಿತ್ಯದ ನಿರ್ವಹಣೆಯ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಉಂಟಾಗಿದೆ. ಈ ಘಟನೆ ಬಗ್ಗೆ ತನಿಖೆಗೆ ಭಾರತ ಆದೇಶಿದೆ ಎಂದು ಹೇಳಿದೆ.
ಓದಿ: ಸರ್ಕಾರಿ ಶಾಲೆಗಳಲ್ಲಿ ಇಂಟರ್ನೆಟ್ ಸೌಲಭ್ಯ: ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?
ನಮ್ಮ ಭಾರತೀಯ ಪಾಲುದಾರರಿಂದ ಈ ಘಟನೆ ತಾಂತ್ರಿಕ ದೋಷದಿಂದಾಗಿದೆ ಹೊರತು ಬೇರೇನೂ ಇಲ್ಲ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ತಮ್ಮ ದೈನಂದಿನ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಮಾರ್ಚ್ 9 ರಂದು ಭಾರತದ ಕ್ಷಿಪಣಿ ಪಾಕ್ನಲ್ಲಿ ಪತನವಾಗಿತ್ತು. ತಾಂತ್ರಿಕ ದೋಷದಿಂದಾಗಿ ಈ ಘಟನೆ ನಡೆದಿದೆ ಎಂಬುದು ಭಾರತ ಹೇಳಿಕೆ ನೀಡಿದೆ. ಅದಕ್ಕಿಂತ ಹೆಚ್ಚಿನ ಪ್ರತಿಕ್ರಿಯೆ ನಾವು ಹೊಂದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆಯಾಗಿ ಪ್ರೈಸ್ ಹೇಳಿದರು.