ETV Bharat / international

ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನಮೋಗೆ ದೊಡ್ಡಣ್ಣ ಟ್ರಂಪ್‌ ಆಹ್ವಾನ..

ಕೊರೊನಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಖುದ್ದಾಗಿ ಭಾಗವಹಿಸುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ.

PM Narendra Modi had a telephone conversation today with US Pres Donald Trump
ಪ್ರಧಾನಿ ಮನೋಗೆ ಟ್ರಂಪ್‌ ದೂರವಾಣಿ ಕರೆ; ಜಿ-7 ಶೃಂಗಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ
author img

By

Published : Jun 2, 2020, 10:44 PM IST

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.

ಅಮೆರಿಕದಲ್ಲಿ ನಡೆಯಲಿರುವ ಜಿ-7 ಶೃಂಗಸಭೆಯಲ್ಲಿ ಭಾಗವಹಿಸುವಂತೆ ಟ್ರಂಪ್‌ ಆಹ್ವಾನ ನೀಡಿದ್ದಾರೆ. ಕೋವಿಡ್‌-19ನಿಂದ ಉಭಯ ದೇಶಗಳಲ್ಲಿನ ಸದ್ಯದ ಪರಿಸ್ಥಿತಿ, ಭಾರತ-ಚೀನಾ ಗಡಿಯಲ್ಲಿ ಉಂಟಾಗಿರುವ ಆತಂಕ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಬದಲಾವಣೆಗಳ ಅವಶ್ಯಕತೆ ಕುರಿತ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಕೊರೊನಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಶೃಂಗಸಭೆಯಲ್ಲಿ ಖುದ್ದಾಗಿ ಭಾಗವಹಿಸುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಕೋವಿಡ್‌-19 ಪರಿಸ್ಥಿತಿಯಿಂದಾಗಿ ಜಿ-7 ಶೃಂಗಸಭೆಯಲ್ಲಿ ತಾವು ಖುದ್ದು ಭಾಗವಹಿಸದೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗವಹಿಸುವುದಾಗಿ ಜರ್ಮನಿ ಚಾನ್ಸಲರ್‌ ಏಂಜೆಲಾ ಮಾರ್ಕಲ್‌ ಕಚೇರಿಯ ಅಧಿಕಾರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ವೈರಸ್‌ನಿಂದಾಗಿ ಕುಸಿದಿರುವ ಆರ್ಥಿಕತೆಗೆ ಉತ್ತೇಜನ ನೀಡುವಂತಹ ಮಹತ್ವದ ಯೋಜನೆಗಳನ್ನು ಕೈಗೊಳ್ಳಬೇಕಿದೆ. ಹೀಗಾಗಿ ಜಿ-7 ಶೃಂಗಸಭೆಗೆ ಸದಸ್ಯ ರಾಷ್ಟ್ರಗಳ ಪ್ರತಿನಿಧಿಗಳು ಖುದ್ದು ಹಾಜರಾಗುವಂತೆ ಅಮೆರಿಕ ಅಧ್ಯಕ್ಷ ಟ್ರಂಪ್‌ ಕರೆ ನೀಡಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.