ನ್ಯೂಯಾರ್ಕ್: ಉಕ್ರೇನ್-ರಷ್ಯಾ ಯುದ್ಧದ ಬಿಕ್ಕಟ್ಟಿನ ಮಧ್ಯೆ ಕ್ವಾಡ್ ನಾಯಕರ ವರ್ಚುವಲ್ ಶೃಂಗಸಭೆ ಗುರುವಾರ ಜರುಗಿತು. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡನ್, ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಭಾಗವಹಿಸಿದ್ದರು.
ಕ್ವಾಡ್ ಸಭೆಯ ಕುರಿತು ಯುಎಸ್ ವಕ್ತಾರ ಜೆನ್ ಪ್ಸಾಕಿ ಮಾಹಿತಿ ನೀಡಿದ್ದಾರೆ. ಉಕ್ರೇನ್‌ನಲ್ಲಿನ ಬೆಳವಣಿಗೆಗಳು ಮತ್ತು ಮಾನವರ ಮೇಲಿನ ಅದರ ಪರಿಣಾಮಗಳನ್ನು ಒಳಗೊಂಡಂತೆ ಸಭೆಯಲ್ಲಿ ಚರ್ಚಿಸಲಾಯಿತು. ಜತೆಗೆ ಏಷ್ಯಾ ಪೆಸಿಫಿಕ್ ವಲಯದಲ್ಲಿನ ಪ್ರಮುಖ ಬೆಳವಣಿಗೆಗಳ ಕುರಿತು ನಾಲ್ವರು ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ನಾಲ್ವರು ನಾಯಕರು ಕ್ವಾಡ್‌ನ ಸಮಕಾಲೀನ ಮತ್ತು ಸಕಾರಾತ್ಮಕ ಕಾರ್ಯಸೂಚಿಗೆ ಸಂಬಂಧಿಸಿದಂತೆ ಅಮೆರಿಕ, ಆಸ್ಟ್ರೇಲಿಯಾದಲ್ಲಿ ನಡೆದ ಸಭೆಯಲ್ಲಿ ಉಪಕ್ರಮಗಳನ್ನು ಕೈಗೊಂಡಿದ್ದರು. ಕಳೆದ ವರ್ಷ ಸೆಪ್ಟೆಂಬರ್ 2021ರಲ್ಲಿ ಕ್ವಾಡ್ ನಾಯಕರು ವಾಷಿಂಗ್ಟನ್‌ನಲ್ಲಿ ಮುಖಾಮುಖಿಯಾಗಿದ್ದರು.
ಕ್ವಾಡ್ ನಾಯಕರು "ಮುಕ್ತ ಇಂಡೋ-ಪೆಸಿಫಿಕ್‌ಗೆ" ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಇದರಲ್ಲಿ ಎಲ್ಲಾ ರಾಷ್ಟ್ರಗಳ ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಲಾಗುತ್ತದೆ ಮತ್ತು ದೇಶಗಳು ಮಿಲಿಟರಿ, ಆರ್ಥಿಕ ಮತ್ತು ರಾಜಕೀಯ ಬಲವಂತದಿಂದ ಮುಕ್ತವಾಗಿವೆ" ಎಂದು ಜಂಟಿ ಹೇಳಿಕೆ ತಿಳಿಸಿದೆ.
ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸುವ ತನ್ನ ಪ್ರಮುಖ ಉದ್ದೇಶದ ಮೇಲೆ ಕ್ವಾಡ್ ಗಮನಹರಿಸಬೇಕು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಮಾನವೀಯ ಮತ್ತು ವಿಪತ್ತು ಪರಿಹಾರ, ಸಾಲದ ಸಮರ್ಥನೀಯತೆ, ಅಂತಾರಾಷ್ಟ್ರೀಯ ಕಾನೂನು ಮತ್ತು ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಬದ್ಧವಾಗಿರಲು ಪ್ರಧಾನಿ ಮೋದಿ ಕರೆ ನೀಡಿದರು.
ಇದನ್ನೂ ಓದಿ: ಉಕ್ರೇನ್ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಬಿತ್ತು ಗುಂಡು.. ಆಸ್ಪತ್ರೆಗೆ ದಾಖಲು