ವಾಷಿಂಗ್ಟನ್: ಭಾರತವು ಬಹು-ಶತಕೋಟಿ ವೆಚ್ಚದ ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ರಷ್ಯಾದಿಂದ ಖರೀದಿಸುತ್ತಿರುವ ಬಗ್ಗೆ ಯುಎಸ್ ಕಳವಳ ವ್ಯಕ್ತಪಡಿಸಿದೆ.
ರಷ್ಯಾ ದೇಶವು S-400 ಕ್ಷಿಪಣಿ ರಕ್ಷಣಾ ವ್ಯವಸ್ಥೆಯನ್ನು ಭಾರತಕ್ಕೆ ಮಾರಾಟ ಮಾಡುತ್ತಿರುವುದು ಪರಸ್ಪರ ಎರಡು ದೇಶಗಳ (ಭಾರತ-ಅಮೆರಿಕ) ನಡುವಿನ ಸಂಬಂಧವನ್ನು ಅಸ್ಥಿರಗೊಳಿಸುವ ಪಾತ್ರದ ಮೇಲೆ ಬೆಳಕು ಚೆಲ್ಲುತ್ತದೆ. ರಷ್ಯಾ ಉದ್ದೇಶವೂರ್ವಕವಾಗಿ ಆಟ ಆಡುತ್ತಿದೆ ಎಂದು ಯುನೈಟೆಡ್ ಸ್ಟೇಟ್ಸ್ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಭಾರತ, ರಾಷ್ಟ್ರೀಯ ಭದ್ರತೆ ಮತ್ತು ಹಿತಾಸಕ್ತಿ ದೃಷ್ಠಿಯಿಂದ ರಷ್ಯಾ ನಿರ್ಮಿತ ಎಸ್-400 ಮಿಸೈಲ್ ವ್ಯವಸ್ಥೆಯನ್ನು ಭಾರತ ಖರೀದಿಸುತ್ತಿರುವುದಾಗಿ ಪ್ರತಿಪಾದಿಸಿದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್, ನಾವು ಭಾರತದೊಂದಿಗಿನ ಪಾಲುದಾರಿಕೆಯನ್ನು ಖಂಡಿತವಾಗಿಯೂ ಗೌರವಿಸುತ್ತೇವೆ. ನಮ್ಮ ಪಾಲುದಾರ ರಾಷ್ಟ್ರಗಳು ರಷ್ಯಾದೊಂದಿಗೆ ಯಾವುದೇ ವಹಿವಾಟು ನಡೆಸದಂತೆ ನಾವು ನಿರ್ಬಂಧ ಹೇರಿದ್ದೇವೆ. ಭಾರತದ ವಿಚಾರದಲ್ಲಿ ಎಸ್ - 400 ವಿಚಾರಕ್ಕೆ ಬರುವುದಾದರೆ ನಾವಿನ್ನೂ ಯಾವುದೇ ನಿರ್ಣಯ ತೆಗದುಕೊಂಡಿಲ್ಲ ಎಂದು ಈ ಹಿಂದೆಯೇ ಹೇಳಿರುವುದನ್ನು ನೀವು ಕೇಳಿದ್ದೀರಿ, ಭಾರತದ ಮೇಲೆ ನಿರ್ಬಂಧ ವಿಧಿಸುವ CAATSA ಕಾಯ್ದೆ ಕುರಿತು ಚರ್ಚೆ ಮುಂದುವರೆಸುವುದಾಗಿ ಹೇಳಿದ್ದಾರೆ.
ಇದನ್ನು ಓದಿ: ನೀವೆಲ್ಲಾದರೂ ತಲೆಕೆಳಗಾದ ಮನೆ ಕಂಡಿದ್ದೀರಾ? ಇಲ್ಲಿದೆ ನೋಡಿ..