ವಿಶ್ವಸಂಸ್ಥೆ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ಪಡೆದುಕೊಂಡ ನಂತರ, ಭಯೋತ್ಪಾದಕ ಸಂಘಟನೆಯಾದ ಅಲ್ಕೈದಾ ತಾಲಿಬಾನ್ನೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದೆ ಎಂದು ವಿಶ್ವಸಂಸ್ಥೆಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ತಾಲಿಬಾನ್ ಆಡಳಿತಕ್ಕೆ ಬಂದ ನಂತರ ಅಫ್ಘಾನಿಸ್ತಾನದಲ್ಲಿ ಹೆಚ್ಚಿನ ಭಯೋತ್ಪಾದಕ ಸಂಘಟನೆಗಳು ಹುಟ್ಟಿಕೊಂಡಿವೆ. ಈ ಮೊದಲಿಗಿಂತ ಹೆಚ್ಚು ಭಯೋತ್ಪಾಕ ಸಂಘಟನೆಗಳು ಈಗ ಅಫ್ಘಾನಿಸ್ತಾನದಲ್ಲಿ ಹೆಚ್ಚಿನ ಸ್ವಾತಂತ್ರ್ಯ ಅನುಭವಿಸುತ್ತಿವೆ ಎಂದು ವಿಶ್ವಸಂಸ್ಥೆಯ ತಜ್ಞರ ವರದಿ ಅಭಿಪ್ರಾಯಪಟ್ಟಿದೆ.
ಅಲ್-ಖೈದಾ ಮತ್ತು ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದಕ ಗುಂಪುಗಳ ನಡುವೆ ಸಂಬಂಧವಿದೆ. ಎರಡೂ ಉಗ್ರಗಾಮಿ ಸಂಘಟನೆಗಳು ಆಫ್ರಿಕಾದಲ್ಲಿ ಹೆಚ್ಚು ಪ್ರಭಾವಿತವಾಗಿವೆ. ಐಸಿಸ್ (ಇಸ್ಲಾಮಿಕ್ ಸ್ಟೇಟ್ ಇರಾಕ್ ಮತ್ತು ಸಿರಿಯಾ) ಆಫ್ರಿಕಾದ ಗ್ರಾಮೀಣ ಭಾಗದಲ್ಲಿ ಚಟುವಟಿಕೆಗಳನ್ನು ಮುಂದುವರೆಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ನ್ಯಾಟೋ ಪಡೆಗಳಿಂದ ಉಕ್ರೇನ್ಗೆ ಶಸ್ತ್ರಾಸ್ತ್ರ ಪೂರೈಕೆ: ವ್ಲಾಡಿಮಿರ್ ಪುಟಿನ್
ಆಗ್ನೇಯ ಏಷ್ಯಾದಲ್ಲಿ ಇಂಡೋನೇಷ್ಯಾ ಮತ್ತು ಫಿಲಿಪೈನ್ಸ್ ಎರಡೂ ಇಸ್ಲಾಮಿಕ್ ಸ್ಟೇಟ್ ಮತ್ತು ಅಲ್ಕೈದಾ ಭಯೋತ್ಪಾದನೆಯನ್ನು ನಿಯಂತ್ರಿಸುವಲ್ಲಿ ಸಫಲವಾಗಿದೆ. ಮುಂದಿನ ದಿನಗಳಲ್ಲಿ ಭಯೋತ್ಪಾದಕರ ಕಾರ್ಯಾಚರಣೆಗಳು ಕುಸಿಯುವ ಆಶಾವಾದವಿದೆ ಎಂದು ತಜ್ಞರು ಹೇಳಿದ್ದಾರೆ.