ನ್ಯೂಯಾರ್ಕ್: ಮಹಾಮಾರಿ ವೈರಸ್ ಕೊರೊನಾದಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದ್ದು, ಈಗಾಗಲೇ ಸಾವಿರಾರು ಜನರು ಈ ಡೆಡ್ಲಿ ವೈರಸ್ನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಇದರ ಮಧ್ಯೆ ಅಮೆರಿಕ ಅಧ್ಯಕ್ಷ ಮತ್ತೊಂದು ಆಘಾತಕಾರಿ ಹೇಳಿಕೆ ನೀಡಿದ್ದಾರೆ.
ಬರುವ ದಿನಗಳು ಮತ್ತಷ್ಟು ಕಠಿಣವಾಗಬಹುದು ಹಾಗೂ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಬಹುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದೇ ಇದಕ್ಕೆ ಮದ್ದಾಗಿದ್ದು, ಈಗಾಗಲೇ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾಗಿ ಟ್ರಂಪ್ ಹೇಳಿದ್ದಾರೆ.
ಅಮೆರಿಕದಲ್ಲಿ ಕೊರೊನಾ ವೈರಸ್ನಿಂದ ಬಳಲುತ್ತಿರುವವರ ಸಂಖ್ಯೆ 3 ಲಕ್ಷ ಗಡಿ ದಾಟಿದ್ದು, ಈಗಾಗಲೇ 8 ಸಾವಿರಕ್ಕೂ ಅಧಿಕ ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದು, ನ್ಯೂಯಾರ್ಕ್ನಲ್ಲಿ 3500 ಜನರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಇದರ ಮಧ್ಯೆ 2 ಲಕ್ಷದವರೆಗೆ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.