ಟೆಕ್ಸಾಸ್, ಅಮೆರಿಕ: ಮೂವರು ಪೊಲೀಸ್ ಅಧಿಕಾರಿಗಳ ಮೇಲೆ ಗುಂಡುಹಾರಿಸಿ, ವ್ಯಕ್ತಿಯೊಬ್ಬ ಪರಾರಿಯಾಗಿರುವ ಘಟನೆ ಟೆಕ್ಸಾಸ್‌ನ ಡೌನ್‌ಟೌನ್ ಬಳಿಯ ಹ್ಯೂಸ್ಟನ್ ನಗರದಲ್ಲಿ ನಡೆದಿದೆ ಎಂದು ಹೂಸ್ಟನ್ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಮೆಕ್ಗೋವನ್ ಸೇಂಟ್ನ 2100 ಬ್ಲಾಕ್ ಸಮೀಪದಲ್ಲಿ ಬಿಳಿ ಬಣ್ಣದ ಮರ್ಸಿಡಿಸ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಪೊಲೀಸ್ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾನೆ. ನಂತರ ಮೂವರು ಪೊಲೀಸ್ ಅಧಿಕಾರಿಗಳ ಮೇಲೆ ಗುಂಡು ಹಾರಿಸಿ, ಕಾರಿನಲ್ಲಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಪೊಲೀಸ್ ಅಧಿಕಾರಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೆಮೊರಿಯಲ್ ಹರ್ಮೆನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಹ್ಯೂಸ್ಟನ್ ಪೊಲೀಸ್ ಇಲಾಖೆ ಗುರುವಾರ ಟ್ವಿಟರ್ ಮೂಲಕ ತಿಳಿಸಿದೆ. ಅಧಿಕಾರಿಗಳ ಮೇಲೆ ಏಕೆ ಗುಂಡು ಹಾರಿಸಲಾಯಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಮೂವರು ಪೊಲೀಸ್ ಅಧಿಕಾರಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಟ್ವಿಟರ್ ಮೂಲಕ ಸ್ಪಷ್ಟನೆ ನೀಡಲಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ