ETV Bharat / international

ಕೊರೊನಾ ವೈರಸ್​ ಹಿನ್ನೆಲೆ: ಅಮೆರಿಕದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಹೆಚ್ಚುತ್ತಿರುವ ಕೊರೊನಾ ವೈರಸ್​ನಿಂದ ಜನರು ಸಾವನ್ನಪ್ಪತ್ತಿದ್ದು, ಇದೀಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದಾರೆ.

author img

By

Published : Mar 14, 2020, 8:26 AM IST

national emergency
ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ

ವಾಷಿಂಗ್ಟನ್​​: ವೇಗವಾಗಿ ಹರಡುವ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಅದಕ್ಕಾಗಿ 50 ಬಿಲಿಯನ್​ ಡಾಲರ್​ ಹಣವನ್ನು ಬಿಡುಗಡೆ ಮಾಡಿದ್ದಾರೆ. ಹಾಗೆಯೇ ಶುಕ್ರವಾರ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದಾರೆ.

ಸಂಯುಕ್ತ ಸರ್ಕಾರದ ಸಂಪೂರ್ಣ ಅಧಿಕಾರವನ್ನು ಸಡಿಲಿಸಲು, ನಾನು ಅಧಿಕೃತವಾಗಿ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸುತ್ತಿದ್ದೇನೆ ಎಂದು ಟ್ರಂಪ್​ ವೈಟ್​ ಹೌಸ್​​ನಲ್ಲಿ ಹೇಳಿಕೆ ನೀಡಿದ್ದಾರೆ. ತುರ್ತು ಕಾರ್ಯಾಚರಣೆ ಕೇಂದ್ರಗಳನ್ನು ಸ್ಥಾಪಿಸಲು ಟ್ರಂಪ್​ ಎಲ್ಲ ರಾಜ್ಯಗಳಿಗೆ ಕರೆ ನೀಡಿದ್ದು, ದೇಶಾದ್ಯಂತ ಸಾಕಷ್ಟು ಪರೀಕ್ಷಾ ಕಿಟ್‌ಗಳ ಕೊರತೆಯ ಬಗ್ಗೆ ಟೀಕೆಗಳ ನಡುವೆ ಸರ್ಕಾರವು ಪರೀಕ್ಷೆಯನ್ನು ವೇಗಗೊಳಿಸುತ್ತಿದೆ ಎಂದು ಹೇಳಿದರು.

48 ರಾಜ್ಯಗಳು ಮತ್ತು ಕೊಲಂಬಿಯಾದ ಜಿಲ್ಲೆಗಳಲ್ಲಿ ಕನಿಷ್ಠ 1,740 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಸಿಎನ್ಎನ್ ವರದಿ ಮಾಡಿದೆ.

ಕನಿಷ್ಠ 41 ಜನರು ಸಾವನ್ನಪ್ಪಿದ್ದು, ಕೇಂದ್ರ ಬಿಂದುವಾಗಿರುವ ವಾಷಿಂಗ್ಟನ್​​​ನಲ್ಲಿ 31 ಜನರು ಸಾವನ್ನಪ್ಪಿದ್ದಾರೆ. ಇನ್ನು ಕನಿಷ್ಠ 457 ಪ್ರಕರಣಗಳು ಬೆಳಕಿಗೆ ಬಂದಿದ್ದು, ಕ್ಯಾಲಿಫೋರ್ನಿಯಾದಲ್ಲಿ ನಾಲ್ಕು, ಫ್ಲೋರಿಡಾದಲ್ಲಿ ಎರಡು, ಜಾರ್ಜಿಯಾದಲ್ಲಿ ಒಂದು, ಕಾನ್ಸಾಸ್‌ನಲ್ಲಿ ಒಂದು, ನ್ಯೂಜೆರ್ಸಿಯಲ್ಲಿ ಒಂದು ಮತ್ತು ದಕ್ಷಿಣ ಡಕೋಟದಲ್ಲಿ ಒಂದು ಸಾವಿನ ಪ್ರಕರಣ ಪತ್ತೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.