ವಾಷಿಂಗ್ಟನ್: ಪೊಲೀಸ್ ವ್ಯವಸ್ಥೆ ಸುಧಾರಣೆಯ ಕುರಿತು ಕಾರ್ಯಕಾರಿ ಆದೇಶಕ್ಕೆ ಸಹಿ ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ದೇಶದಲ್ಲಿ ಉತ್ತಮ ಕಾನೂನು ಮತ್ತು ಸುವ್ಯವಸ್ಥೆಯನ್ನು ನಾನು ಬಯಸುತ್ತೇನೆ. ಈ ಆದೇಶ ನ್ಯಾಯಸಮ್ಮತವಾಗಿ ಇರಲಿದೆ ಎಂದು ಅವರು ಹೇಳಿದ್ದಾರೆ.
ಜಾರ್ಜ್ ಫ್ಲಾಯ್ಡ್ ಮರಣದ ಬಳಿಕ ಪೋಲಿಸ್ ನೀತಿಗಳಲ್ಲಿ ಬದಲಾವಣೆಯಾಗಬೇಕು ಎಂಬ ಕೂಗು ದೊಡ್ಡಣ್ಣನ ನಾಡಿನಲ್ಲಿ ಜೋರಾಗಿ ಕೇಳಿಬಂದಿತ್ತು.