ವಾಷಿಂಗ್ಟನ್(ಅಮೆರಿಕ): ಈ ತಿಂಗಳಾಂತ್ಯದಲ್ಲಿ ಗುಜರಾತ್ನ ಅಹಮದಾಬಾದ್ನಲ್ಲಿರುವ ಮೊಟೇರಾ ಸ್ಟೇಡಿಯಂನ ಉದ್ಘಾಟನಾ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಈ ಹಿಂದೆ ಟೆಕ್ಸಾಸ್ ನಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅಥಿತಿಯಾಗಿ ಪಾಲ್ಗೊಂಡಂತೆ ಇದೀಗ ಮೊಟೆರಾ ಸ್ಟೇಡಿಯಂ ಉದ್ಘಾಟನಾ ಕಾರ್ಯಕ್ರಮದಲ್ಲಿ ಟ್ರಂಪ್ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪ್ರಧಾನಿ ಮೋದಿ ನನ್ನ ಉತ್ತಮ ಸ್ನೇಹಿತ, ಭಾರತ ಮತ್ತು ಅಮೆರಿಕ ದೇಶದ ನಡುವೆ ಸಂಭಾವ್ಯ ಬಾಂಧವ್ಯವನ್ನು ಹೊಂದಿದ್ದು, ಇದೇ ತಿಂಗಳ ಅಂತ್ಯದಲ್ಲಿ ನಾನು ಭಾರತಕ್ಕೆ ಪಯಣ ಬೆಳಸಲಿದ್ದೇನೆ ಎಂದಿದ್ದಾರೆ.
ಇನ್ನು ಟ್ರಂಪ್ ಆಗಮನದ ಬಗ್ಗೆ ಮೋದಿ ಸಂತಸ ವ್ಯಕ್ತಪಡಿಸಿದ್ದು, ಈ ಕಾರ್ಯಕ್ರಮಕ್ಕೆ 5-7 ಮಿಲಿಯನ್ ಜನರು ಪಾಲ್ಗೊಳ್ಳಲಿದ್ದಾರೆ ಎಂದಿದ್ದಾರೆ.