ETV Bharat / international

ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆತಂಕಕಾರಿ: ಬ್ಯಾಚೆಲೆಟ್ ಹೇಳಿಕೆ ತಿರಸ್ಕರಿಸಿದ ಭಾರತ - ಭಾರತದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ

ಜಿನೀವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 48ನೇ ಅಧಿವೇಶನದಲ್ಲಿ ಮಾತನಾಡಿದ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಮಿಶೆಲ್ ಬ್ಯಾಚೆಲೆಟ್, ಭಯೋತ್ಪಾದನೆಯನ್ನು ಎದುರಿಸಲು ಮತ್ತು ಜಮ್ಮು- ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಸರ್ಕಾರದ ಪ್ರಯತ್ನಗಳನ್ನು ಒಪ್ಪಿಕೊಳ್ಳುತ್ತೇವೆ. ಆದರೆ, ನಿರ್ಬಂಧಿತ ಕ್ರಮಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಬಹುದು ಮತ್ತು ಮತ್ತಷ್ಟು ಉದ್ವಿಗ್ನತೆಯನ್ನು ಉಂಟು ಮಾಡಬಹುದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ

Michelle Bachelet
ಮಿಶೆಲ್ ಬ್ಯಾಚೆಲೆಟ್
author img

By

Published : Sep 14, 2021, 9:27 AM IST

ನವದೆಹಲಿ: ಭಾರತದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ಆತಂಕಕಾರಿ ಬೆಳವಣಿಗೆ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಪದೇ ಪದೆ ತಾತ್ಕಾಲಿಕ ಸಂವಹನ ಸ್ಥಗಿತಗೊಳಿಸುವಿಕೆಯ ಕುರಿತು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್ ಮಿಶೆಲ್ ಬ್ಯಾಚೆಲೆಟ್ ಮಾತನಾಡಿದ್ದಾರೆ.

ಜಿನೀವಾದಲ್ಲಿ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ 48 ನೇ ಅಧಿವೇಶನದಲ್ಲಿ ಮಾತನಾಡಿದ ಅವರು, "ಭಯೋತ್ಪಾದನೆಯನ್ನು ಎದುರಿಸಲು ಮತ್ತು ಜಮ್ಮು - ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ಉತ್ತೇಜಿಸಲು ಭಾರತೀಯ ಸರ್ಕಾರದ ಪ್ರಯತ್ನಗಳನ್ನು ಒಪ್ಪಿಕೊಳ್ಳುತ್ತೇವೆ. ಆದರೆ, ನಿರ್ಬಂಧಿತ ಕ್ರಮಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಬಹುದು ಮತ್ತು ಮತ್ತಷ್ಟು ಉದ್ವಿಗ್ನತೆಯನ್ನು ಉಂಟುಮಾಡಬಹುದು" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

'ಜಮ್ಮು ಮತ್ತು ಕಾಶ್ಮೀರದಲ್ಲಿ ಅಹಿತಕರ ಘಟನೆಗಳನ್ನು ತಡೆಯಲು ಅಲ್ಲಿನ ಅಧಿಕಾರಿಗಳು ತಾತ್ಕಾಲಿಕವಾಗಿ ಸಂವಹನ ಸ್ಥಗಿತಗೊಳಿಸುತ್ತಾರೆ. ಆದರೆ, ಇದು ಇತರ ಜನರ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಚಲಾಯಿಸಲು ಕಷ್ಟವಾಗುತ್ತದೆ. ಅಷ್ಟೇ ಅಲ್ಲದೆ, ಪತ್ರಕರ್ತರು ಈ ಒತ್ತಡದ ನಡುವೆ ನಿರಂತರವಾಗಿ ಕೆಲಸಗಳನ್ನು ಮಾಡಬೇಕಾಗುತ್ತದೆ' ಎಂದು ಹೇಳಿದ್ದಾರೆ.

"ಭಾರತದಾದ್ಯಂತ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಯ ನಿರಂತರ ಬಳಕೆ ಚಿಂತಾಜನಕವಾಗಿದೆ. ಅದರಲ್ಲಿ ಮುಖ್ಯವಾಗಿ ಜಮ್ಮು ಮತ್ತು ಕಾಶ್ಮೀರವು ದೇಶದಲ್ಲಿ ಅತಿ ಹೆಚ್ಚು ಬಾರಿ ಕಾಯ್ದೆ ಬಳಕೆಗೆ ಒಳಗಾದ ರಾಜ್ಯವಾಗಿದೆ" ಎಂದು ಬ್ಯಾಚೆಲೆಟ್ ಹೇಳಿದರು.

ಆರೋಪ ತಿರಸ್ಕರಿಸಿದ ಭಾರತ

ಆದರೆ ಬ್ಯಾಚೆಲೆಟ್​ ಹೇಳಿಕೆಗೆ ಭಾರತವು ಯಾವುದೇ ಪ್ರತಿಕ್ರಿಯೆ ನೀಡದೇ ಬಲವಾಗಿ ತಿರಸ್ಕರಿಸಿತು. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮುಖ್ಯಸ್ಥರ ಟೀಕೆಗಳನ್ನು ಈ ಹಿಂದೆಯೂ ಅನೇಕ ಬಾರಿ ಭಾರತವು ಬಲವಾಗಿ ತಿರಸ್ಕರಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.