ವಾಷಿಂಗ್ಟನ್ : ಅಮೆರಿಕದಲ್ಲಿ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 12 ಮಿಲಿಯನ್ ದಾಟಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.
ಸಾಂಕ್ರಾಮಿಕ ಸೋಂಕಿನಿಂದ ಯುಎಸ್ನಲ್ಲಿ ಇದುವರೆಗೆ 255,414 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೊರೊನಾ ಹಿಂದಿಗಿಂತಲೂ ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ಶುಕ್ರವಾರ 195,500ಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಅಮೆರಿಕದಲ್ಲಿ ಒಂದೇ ದಿನ ಅತಿ ಹೆಚ್ಚು ಹಾಗೂ ಕೆಲ ವಾರಗಳಲ್ಲಿ ಇದೇ ಮೊದಲ ಬಾರಿಗೆ ತೀವ್ರ ಏರಿಕೆ ಕಂಡುಬಂದಿದೆ. ಈ ಹಿಂದೆ ಜುಲೈನಲ್ಲಿ ಒಂದೇ ದಿನ 77,100 ಪ್ರಕರಣಗಳು ಕಂಡುಬಂದಿದ್ದು ಈವರೆಗಿನ ದಾಖಲೆಯಾಗಿತ್ತು.