ವಾಷಿಂಗ್ಟನ್: ಅಮೆರಿಕದ 46ನೇ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಗೆಲುವು ದಾಖಲಿಸಿದ್ದಾರೆ ಎಂದು ಅಮೆರಿಕ ಕಾಂಗ್ರೆಸ್ ಅಧಿಕೃತ ಘೋಷಣೆ ಮಾಡಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬೈಡನ್ ಗೆಲುವು ಸಾಧಿಸಿದ್ದು, ಜನವರಿ 20ರಂದು ಅವರು ಅಮೆರಿಕದ ನೂತನ ಅಧ್ಯಕ್ಷರಾಗಿ ಪ್ರಮಾಣ ಸ್ವೀಕಾರ ಮಾಡಲಿದ್ದಾರೆ. ಇವರ ಜತೆಗೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾಗಿ ಪದಗ್ರಹಣ ಮಾಡುವುದು ಖಚಿತಗೊಂಡಿದೆ.
ಓದಿ: ಜ.20ಕ್ಕೂ ಮೊದಲೇ ಟ್ರಂಪ್ ತೆಗೆದುಹಾಕಿ: ರಿಪಬ್ಲಿಕನ್ ನಾಯಕರ ಒತ್ತಾಯ; ಮೋದಿ ಟ್ವೀಟ್
ನವೆಂಬರ್ ತಿಂಗಳಲ್ಲಿ ನಡೆದಿದ್ದ ಚುನಾವಣೆ ಇಡೀ ವಿಶ್ವದ ಗಮನ ಸೆಳೆದಿತ್ತು. ರಿಪಬ್ಲಿಕನ್ ಪಕ್ಷದಿಂದ ಟ್ರಂಪ್ ಎರಡನೇ ಅವಧಿಗೆ ಹಾಗೂ ಡೆಮಾಕ್ರಟಿಕ್ ಪಕ್ಷದಿಂದ ಬೈಡನ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದರು. ಈ ಚುನಾವಣೆಯಲ್ಲಿ ಬೈಡನ್ 306 ಹಾಗೂ ಟ್ರಂಪ್ 232 ಎಲೆಕ್ಟೋರಲ್ ವೋಟ್ ಪಡೆದುಕೊಂಡಿದ್ದರು. ಜತೆಗೆ ಬರೋಬ್ಬರಿ 8 ಕೋಟಿ ಮತ ಪಡೆದು ಬೈಡನ್ ಗೆಲುವು ದಾಖಲು ಮಾಡಿದ್ದರು.
-
Congress accepts Electoral College result, which clears the way for Joe Biden (in file photo) to become president of the United States: Reuters pic.twitter.com/ZkppTthSbr
— ANI (@ANI) January 7, 2021 " class="align-text-top noRightClick twitterSection" data="
">Congress accepts Electoral College result, which clears the way for Joe Biden (in file photo) to become president of the United States: Reuters pic.twitter.com/ZkppTthSbr
— ANI (@ANI) January 7, 2021Congress accepts Electoral College result, which clears the way for Joe Biden (in file photo) to become president of the United States: Reuters pic.twitter.com/ZkppTthSbr
— ANI (@ANI) January 7, 2021
ಇದಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿರುವ ಅಮೆರಿಕ ಕಾಂಗ್ರೆಸ್ ಅಧಿಕೃತ ಘೋಷಣೆ ಮಾಡಿದೆ. ಇದರ ಜತೆಗೆ ಜನವರಿ 20ರಂದು ಬೈಡನ್ ಅಮೆರಿಕದ 46ನೇ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ. ಅಮೆರಿಕ ಕಾಂಗ್ರೆಸ್ನಿಂದ ಚುನಾವಣೆ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪೊಲೀಸರು ಹಾಗೂ ಟ್ರಂಪ್ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಇದರ ಬೆನ್ನಲ್ಲೇ ವಾಷಿಂಗ್ಟನ್ ಡಿಸಿಯಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿ ಅಲ್ಲಿನ ಮೇಯರ್ ಆದೇಶ ಹೊರಡಿಸಿದ್ದಾರೆ.