ವಾಷಿಂಗ್ಟನ್ : ಕೋವಿಡ್ ಹೊಸ ರೂಪಾಂತರಿ ಒಮಿಕ್ರಾನ್ ಜಗತ್ತಿನ ತಲ್ಲಣಕ್ಕೆ ಕಾರಣವಾಗಿದೆ. ಅಮೆರಿಕಾದಲ್ಲಿ ಈ ವೈರಸ್ ಹಡುವಿಕೆ ಆರು ಪಟ್ಟು ಹೆಚ್ಚಾಗಿದೆ. ಕೊರೊನಾ ಪ್ರಕರಣ ಸಂಖ್ಯೆಯಲ್ಲೂ ಗಣನೀಯವಾಗಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 81ಲಕ್ಷಕ್ಕೂ ಅಧಿಕ ಪ್ರಕರಣ ದಾಖಲಾಗಿವೆ. ಇದರಲ್ಲಿ ಹೆಚ್ಚಿನ ಮಂದಿ ಒಮಿಕ್ರಾನ್ ಸೋಂಕಿತರಾಗಿದ್ದಾರೆ. ಇನ್ನು, 1,811 ಸೋಂಕಿತರು ಮೃತಪಟ್ಟಿದ್ದಾರೆ.
ಒಮಿಕ್ರಾನ್ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಪರಿಸ್ಥಿತಿಯನ್ನು ಎದುರಿಸಲು ಆಡಳಿತ ಸಿದ್ಧವಾಗಿದೆ. 50 ಕೋಟಿ ಕ್ಷಿಪ್ರ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಗುವುದು.
ಲಸಿಕೆ ಡೋಸ್‌ಗಳನ್ನು ಹೆಚ್ಚಿಸುತ್ತಿದ್ದು, ವ್ಯಾಕ್ಸಿನೇಷನ್‌ಗಾಗಿ ಆಸ್ಪತ್ರೆಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ಲಸಿಕೆ ಪಡೆಯುವುದು ಪ್ರತಿಯೊಬ್ಬ ಅಮೆರಿಕ ಪ್ರಜೆಯ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಲಸಿಕೆ ಪಡೆಯದವರ ವಿರುದ್ಧ ಒಮಿಕ್ರಾನ್ ವಿನಾಶಕಾರಿ ಪರಿಣಾಮ ಬೀರುತ್ತದೆ. ನಾವೆಲ್ಲರೂ ವೈರಸ್ ವಿರುದ್ಧ ಹೋರಾಡಲು ಆಯಾಸಗೊಂಡಿದ್ದೇವೆ. ಹೀಗಾಗಿ, ಇದರ ಅಂತ್ಯವನ್ನು ಬಯಸುತ್ತೇವೆ ಎಂದು ಬೈಡನ್ ಹೇಳಿದ್ದಾರೆ. ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಅಲ್ಲಿನ ಜನರಲ್ಲಿ ಮನವಿ ಮಾಡಿದ್ದಾರೆ.
ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಹೊರತಾಗಿಯೂ ನಗರದಲ್ಲಿ ನಿರ್ಬಂಧಗಳು ವಿಧಿಸುವ ಅವಶ್ಯಕತೆ ಇಲ್ಲ ಎಂದು ನ್ಯೂಯಾರ್ಕ್ ಮೇಯರ್ ಬಿಲ್ ಡಿ ಬ್ಲಾಸಿಯೊ ಸ್ಪಷ್ಟಪಡಿಸಿದ್ದಾರೆ. ಇನ್ಮುಂದೆ ಯಾವುದೇ ಲಾಕ್‌ಡೌನ್‌ಗಳು ಇರುವುದಿಲ್ಲ ಎಂದು ಭಾವಿಸುತ್ತೇನೆ ಎಂದಿರುವ ಅವರು, ಟೈಮ್ಸ್ ಸ್ಕ್ವೇರ್‌ನಲ್ಲಿ ಹೊಸ ವರ್ಷಾಚರಣೆ ನಡೆಸುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
ಇದನ್ನೂ ಓದಿ: ಒಮಿಕ್ರಾನ್ ಹರಡದಂತೆ ಮಕ್ಕಳಿಗೆ ಪೋಷಕರು ಲಸಿಕೆ ಹಾಕಿಸಬೇಕು : ಇಸ್ರೇಲಿ ಪ್ರಧಾನಿ