ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದು, ಸಂಕಷ್ಟದ ಸಂದರ್ಭಕ್ಕೆ ಅಮೆರಿಕ ಕಳವಳ ವ್ಯಕ್ತಪಡಿಸಿದೆ.
ಶ್ವೇತಭವನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಈ ಬಗ್ಗೆ ಟ್ವೀಟ್ ಮಾಡಿದ್ದು, 'ಕಳೆದ ಮೂರು ದಿನಗಳಲ್ಲಿ ಭಾರತದಲ್ಲಿ 3 ಲಕ್ಷ ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಸಾಂಕ್ರಾಮಿಕ ರೋಗದ ವಿರುದ್ಧ ಧೈರ್ಯದಿಂದ ಹೋರಾಡಲು ಭಾರತಕ್ಕೆ ಯಾವುದೇ ರೀತಿಯ ಸಹಾಯ ಮಾಡಲು ನಾವು ಸಿದ್ಧ' ಎಂದು ತಿಳಿಸಿದ್ದಾರೆ.
-
The U.S. is deeply concerned by the severe COVID outbreak in India. We are working around the clock to deploy more supplies and support to our friends and partners in India as they bravely battle this pandemic. More very soon.
— Jake Sullivan (@JakeSullivan46) April 25, 2021 " class="align-text-top noRightClick twitterSection" data="
">The U.S. is deeply concerned by the severe COVID outbreak in India. We are working around the clock to deploy more supplies and support to our friends and partners in India as they bravely battle this pandemic. More very soon.
— Jake Sullivan (@JakeSullivan46) April 25, 2021The U.S. is deeply concerned by the severe COVID outbreak in India. We are working around the clock to deploy more supplies and support to our friends and partners in India as they bravely battle this pandemic. More very soon.
— Jake Sullivan (@JakeSullivan46) April 25, 2021
ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಅವರು, ಭಾರತಕ್ಕೆ ಸಹಾಯ ಮಾಡಲು ಮುಂದಾಗಿದ್ದಾರೆ. ಭಾರತವನ್ನು ತನ್ನ ಉತ್ತಮ ಪಾಲುದಾರ ರಾಷ್ಟ್ರ ಎಂದು ಬಣ್ಣಿಸಿರುವ ಅವರು, ವೆಂಟಿಲೇಟರ್‌ಗಳು ಅಥವಾ ಚಿಕಿತ್ಸಕಗಳನ್ನು ಒದಗಿಸುತ್ತೇವೆ ಎಂದು ಹೇಳಿದ್ದಾರೆ.
ಈ ಹಿಂದೆ ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮಾತನಾಡಿದ್ದು, "ಪ್ರಕರಣಗಳ ಹೆಚ್ಚಳವನ್ನು ಎದುರಿಸಲು ಭಾರತಕ್ಕೆ ಬೆಂಬಲ ನೀಡುತ್ತೇವೆ. ಕೊರೊನಾ ಪ್ರಕರಣಗಳನ್ನು ಎದುರಿಸುತ್ತಿರುವ ಭಾರತೀಯ ಜನರಿಗೆ ಒಗ್ಗಟ್ಟಿನ ಸಂದೇಶವನ್ನು ಕಳುಹಿಸಲು ಬಯಸುತ್ತೇನೆ. ಈ ಹೋರಾಟದಲ್ಲಿ ಫ್ರಾನ್ಸ್ ನಿಮ್ಮೊಂದಿಗಿದೆ. ಬೆಂಬಲವನ್ನು ನೀಡಲು ನಾವು ಸಿದ್ಧರಿದ್ದೇವೆ" ಎಂದು ಹೇಳಿದರು.
-
❝I want to send a message of solidarity to the Indian people, facing a resurgence of COVID-19 cases. France is with you in this struggle, which spares no-one. We stand ready to provide our support.❞
— Emmanuel Lenain (@FranceinIndia) April 23, 2021 " class="align-text-top noRightClick twitterSection" data="
— President Emmanuel Macron
">❝I want to send a message of solidarity to the Indian people, facing a resurgence of COVID-19 cases. France is with you in this struggle, which spares no-one. We stand ready to provide our support.❞
— Emmanuel Lenain (@FranceinIndia) April 23, 2021
— President Emmanuel Macron❝I want to send a message of solidarity to the Indian people, facing a resurgence of COVID-19 cases. France is with you in this struggle, which spares no-one. We stand ready to provide our support.❞
— Emmanuel Lenain (@FranceinIndia) April 23, 2021
— President Emmanuel Macron
ಇದನ್ನೂ ಓದಿ: ಕಳೆದ 24 ಗಂಟೆಯಲ್ಲಿ 3 ಲಕ್ಷಕ್ಕೂ ಅಧಿಕ ಜನರಿಗೆ ಸೋಂಕು: ಎರಡೂವರೆ ಸಾವಿರಕ್ಕೂ ಹೆಚ್ಚು ಮಂದಿ ಸಾವು
ದೇಶದ ಕೋವಿಡ್ ವರದಿ
ದೇಶದಲ್ಲಿ ಇಂದು 3,49,691 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 2,767 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 2,17,113 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 1,69,60,172 ಕೊರೊನಾ ಪ್ರಕರಣಗಳು ದಾಖಲಾಗಿವೆ. 1,40,85,110 ಸೋಂಕಿತರು ಗುಣಮುಖರಾಗಿದ್ದಾರೆ. ಸುಮಾರು 1,92,311 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 26,82,751 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.