ವಾಷಿಂಗ್ಟನ್: ಭಾರತ-ಅಮೆರಿಕ ರಕ್ಷಣಾ ಸಂಬಂಧ ಬಲಪಡಿಸುವ ನಿಟ್ಟಿನಲ್ಲಿ ಅಮೆರಿಕ ನೌಕಾಪಡೆಯು ಎರಡು MRH-60 ಆರ್ ಮಲ್ಟಿ ರೋಲ್ ಹೆಲಿಕಾಪ್ಟರ್‌ಗಳನ್ನು ಭಾರತೀಯ ನೌಕಾಪಡೆಗೆ ಹಸ್ತಾಂತರಿಸಿದೆ.
ಲಾಕ್ಹೀಡ್ ಮಾರ್ಟಿನ್ ಕಂಪನಿ ತಯಾರಿಸಿರುವ 24 ಹೆಲಿಕಾಪ್ಟರ್‌ಗಳನ್ನು ಭಾರತೀಯ ನೌಕಾಪಡೆಯು ಅಮೆರಿಕ ಸರ್ಕಾರದಿಂದ ವಿದೇಶಿ ಮಿಲಿಟರಿ ಉಪಕರಣದ ಮಾರಾಟದ ಅಡಿಯಲ್ಲಿ 2.4 ಬಿಲಿಯನ್ ಡಾಲರ್ ವೆಚ್ಚದಲ್ಲಿ ಖರೀದಿಸುತ್ತಿದೆ. ಇದರ ಭಾಗವಾಗಿ ಎರಡು ಹೆಲಿಕಾಪ್ಟರ್‌ಗಳನ್ನು ಹಸ್ತಾಂತರಿಸಿದೆ.
ಸ್ಯಾನ್ ಡಿಯಾಗೋದ ನಾರ್ತ್ ಐಲ್ಯಾಂಡ್ ನೌಕಾ ವಾಯು ನಿಲ್ದಾಣದಲ್ಲಿ ಅಮೆರಿಕದ ನೌಕಾಪಡೆಯಿಂದ ಭಾರತೀಯ ನೌಕಾಪಡೆಗೆ ಹೆಲಿಕಾಪ್ಟರ್‌ಗಳನ್ನು ಹಸ್ತಾಂತರಿಸುವ ಕಾರ್ಯಕ್ರಮ ನಡೆಯಿತು. ಈ ವೇಳೆ ಅಮೆರಿಕದಲ್ಲಿರುವ ಭಾರತೀಯ ರಾಯಭಾರಿ ತಾರಂಜಿತ್ ಸಿಂಗ್ ಉಪಸ್ಥಿತರಿದ್ದರು.
ಆಲ್-ವೆದರ್ ಮಲ್ಟಿ ರೋಲ್ ಹೆಲಿಕಾಪ್ಟರ್‌ಗಳ ಪ್ರವೇಶವು ಭಾರತ ಮತ್ತು ಅಮೆರಿಕದ ದ್ವಿಪಕ್ಷೀಯ ರಕ್ಷಣಾ ಸಂಬಂಧಗಳಲ್ಲಿ ಒಂದು ಪ್ರಮುಖ ಮೈಲಿಗಲ್ಲು ಎಂದು ಸಂಧು ಹೇಳಿದ್ದಾರೆ. ಭಾರತ ಮತ್ತು ಅಮೆರಿಕದ ಸ್ನೇಹ ಉತ್ತುಂಗಕ್ಕೆ ಏರಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ದ್ವಿಪಕ್ಷೀಯ ರಕ್ಷಣಾ ವ್ಯಾಪಾರವು 20 ಬಿಲಿಯನ್ ಡಾಲರ್‌ಗಳಿಗೆ ವಿಸ್ತರಿಸಿದೆ ಎಂದು ಅವರು ತಿಳಿಸಿದ್ದಾರೆ.
ಇದು ಎಲ್ಲಾ ಹವಾಮಾನದಲ್ಲಿ ಬಳಸಬಹುದಾದ ಹೆಲಿಕಾಪ್ಟರ್ ಆಗಿದ್ದು, ಅತ್ಯಾಧುನಿಕ ಏವಿಯಾನಿಕ್ಸ್‌ನೊಂದಿಗೆ ಅನೇಕ ಕಾರ್ಯಗಳನ್ನು ಬೆಂಬಲಿಸಲು ವಿನ್ಯಾಸಗೊಳಿಸಲಾಗಿದೆ. ಈ ಎಂಆರ್‌ಹೆಚ್‌ನ ಸೇರ್ಪಡೆಯು ಭಾರತೀಯ ನೌಕಾಪಡೆಯ ಮೂರು ಆಯಾಮದ ಸಾಮರ್ಥ್ಯಗಳನ್ನು ಹೆಚ್ಚಿಸುತ್ತದೆ. ಈ ಹೆಲಿಕಾಪ್ಟರ್‌ಗಳನ್ನು ಹಲವಾರು ವಿಶಿಷ್ಟ ಉಪಕರಣಗಳು ಮತ್ತು ಶಸ್ತ್ರಾಸ್ತ್ರಗಳೊಂದಿಗೆ ಸಿದ್ಧಪಡಿಸಲಾಗಿದೆ.
ಈ ಹೆಲಿಕಾಪ್ಟರ್‌ಗಳ ಚಾಲನೆಗೆ ಸಂಬಂಧಿಸಿದಂತೆ ಭಾರತೀಯ ನೌಕಾಪಡೆಯ ಸಿಬ್ಬಂದಿಯ ಮೊದಲ ಬ್ಯಾಚ್ ಪ್ರಸ್ತುತ ಅಮೆರಿಕದಲ್ಲಿ ತರಬೇತಿ ಪಡೆಯುತ್ತಿದೆ.
ಇದನ್ನೂ ಓದಿ:‘Social Media’ ಲಸಿಕೆ ಬಗ್ಗೆ ತಪ್ಪು ಮಾಹಿತಿ ನೀಡಿ ಜನರನ್ನು ಕೊಲ್ಲುತ್ತಿದೆ: ಬೈಡನ್