ವಾಷಿಂಗ್ಟನ್: ವಿಶ್ವದ ದೊಡ್ಡಣ್ಣ ಅಮೆರಿಕದ ಬಳಿಕ ಭಾರತದಲ್ಲೇ ಅತಿ ಹೆಚ್ಚು ಕೊರೊನಾ ಟೆಸ್ಟ್ ನಡೆದಿದ್ದು, ಇದೇ ವಿಚಾರವಾಗಿ ಭಾರತವನ್ನ ಅಮೆರಿಕ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಹೊಗಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದಲ್ಲಿ ನಡೆಸಲಾಗುತ್ತಿರುವ ಟೆಸ್ಟ್ಗೆ ಸಂಬಂಧಿಸಿದಂತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
-
#WATCH US: Secret Service agents escorted President Donald Trump out of White House briefing room shortly after the start of a news conference.
— ANI (@ANI) August 10, 2020 " class="align-text-top noRightClick twitterSection" data="
After returning to the news conference, President Trump informed reporters that there was a shooting outside the White House. pic.twitter.com/msZou6buGP
">#WATCH US: Secret Service agents escorted President Donald Trump out of White House briefing room shortly after the start of a news conference.
— ANI (@ANI) August 10, 2020
After returning to the news conference, President Trump informed reporters that there was a shooting outside the White House. pic.twitter.com/msZou6buGP#WATCH US: Secret Service agents escorted President Donald Trump out of White House briefing room shortly after the start of a news conference.
— ANI (@ANI) August 10, 2020
After returning to the news conference, President Trump informed reporters that there was a shooting outside the White House. pic.twitter.com/msZou6buGP
ಅಮೆರಿಕದಲ್ಲಿ ಇಲ್ಲಿಯವರೆಗೆ 65 ಮಿಲಿಯನ್ ಕೊರೊನಾ ಟೆಸ್ಟ್ ನಡೆಸಲಾಗಿದ್ದು, ಅದೇ ರೀತಿ ಭಾರತದಲ್ಲಿ 11 ಮಿಲಿಯನ್ ಟೆಸ್ಟ್ ನಡೆಸಲಾಗಿದ್ದು, ಯುಎಸ್ ಬಳಿಕ ಭಾರತವೇ ಅತಿ ಹೆಚ್ಚು ಟೆಸ್ಟ್ ನಡೆಸಿದೆ ಎಂದಿದ್ದಾರೆ. ಕಳೆದ ಕೆಲ ದಿನಗಳಿಂದ ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಪ್ರಮಾಣ ತಗ್ಗಿದೆ. ಸಾವಿನ ಸಂಖ್ಯೆಯಲ್ಲೂ ಇಳಿಕೆ ಕಂಡು ಬಂದಿದೆ ಎಂದು ಅವರು ಹೇಳಿದ್ದಾರೆ. ಇದರ ಜತೆಗೆ ಈ ವರ್ಷದ ಕೊನೆಯ ವೇಳೆಗೆ ಮಹಾಮಾರಿಗೆ ಲಸಿಕೆ ಕಂಡು ಹಿಡಿಯುವುದಾಗಿ ಭರವಸೆ ನೀಡಿದ್ದಾರೆ. ಸದ್ಯ ಅಮೆರಿಕದಲ್ಲಿ 5,075,678 ಕೊರೊನಾ ಕೇಸ್ಗಳಿವೆ.
ಇದೇ ವೇಳೆ, ಚೀನಾ ವಿರುದ್ಧ ವಾಗ್ದಾಳಿ ನಡೆಸಿರುವ ಡೊನಾಲ್ಡ್ ಟ್ರಂಪ್, ನಾವು ಅದರ ನಡೆ ವಿರುದ್ಧಆಕ್ರೋಶಗೊಂಡಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಆ ರಾಷ್ಟ್ರದ ಜತೆ ಒಪ್ಪಂದ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಸುದ್ದಿಗೋಷ್ಠಿ ವೇಳೆ ಶೂಟೌಟ್
ಡೊನಾಲ್ಡ್ ಟ್ರಂಪ್ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಭದ್ರತಾ ಸಿಬ್ಬಂದಿಯೊಬ್ಬ ಅನಾಮಿಕ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿದ್ದು, ಇದೇ ವಿಚಾರವಾಗಿ ಮಾತನಾಡಿರುವ ಅಮೆರಿಕ ಅಧ್ಯಕ್ಷ, ಆತನ ಬಳಿ ಗನ್ ಇದ್ದಿದ್ದಾಗಿ ತಿಳಿದು ಬಂದಿದೆ ಎಂದಿದ್ದಾರೆ.