ಢಾಕಾ (ಬಾಂಗ್ಲಾದೇಶ): ಮಸೀದಿಯೊಳಗೆ ನುಗ್ಗಿದ ಇಸ್ಲಾಮಿಕ್ ಗುಂಪೊಂದು ಪ್ರಾರ್ಥನೆ ಸಲ್ಲಿಸುತ್ತಿದ್ದವರ ಮೇಲೆ ಹಲ್ಲೆ ನಡೆಸಿದ ಪರಿಣಾಮ 12 ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾದೇಶ ಗೈಬಂಧ ಜಿಲ್ಲೆಯಲ್ಲಿ ನಡೆದಿದೆ.
ಮೂಲಭೂತವಾದಿ ಇಸ್ಲಾಮಿಸ್ಟ್ ಗುಂಪು ಹಿಫಾಜತ್ - ಎ - ಇಸ್ಲಾಂನ ಕಾರ್ಯಕರ್ತರು ಕೃತ್ಯ ಎಸಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮಸೀದಿಯ ಸಮಿತಿಯ ಬಗ್ಗೆ ಇರುವ ಭಿನ್ನಾಭಿಪ್ರಾಯಗಳು ಈ ಅಹಿತಕರ ಘಟನೆಗೆ ಕಾರಣವಾಗಿದೆ ಎಂದು ಪೊಲೀಸ್ ಅಧಿಕಾರಿ ಬುಲ್ಬುಲ್ ಇಸ್ಲಾಂ ತಿಳಿಸಿದ್ದಾರೆ.
ಇದನ್ನೂ ಓದಿ: ಕಳ್ಳತನ ಪ್ರಕರಣ ಭೇದಿಸಲು ಬಂದ ಪೊಲೀಸ್ ಅಧಿಕಾರಿಯನ್ನೇ ಥಳಿಸಿ ಕೊಂದ ಜನರು!
ಘಟನೆ ಸಂಬಂಧ ಸುಂದರ್ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.