ಕಾಬೂಲ್: ಅಫ್ಘಾನಿಸ್ತಾನದ ದಕ್ಷಿಣ ಹೆಲ್ಮಂಡ್ ಪ್ರಾಂತ್ಯದಲ್ಲಿ ಎರಡು ಅಫ್ಘಾನ್ ಸೇನಾ ಹೆಲಿಕಾಪ್ಟರ್‌ಗಳು ಮಿಡೇರ್‌ನಲ್ಲಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ.
ಮಂಗಳವಾರ ಮಧ್ಯರಾತ್ರಿ ಪ್ರಾಂತೀಯ ರಾಜಧಾನಿ ಲಷ್ಕರ್ ಗಹ್‌ನ ನೈರುತ್ಯ ದಿಕ್ಕಿನಲ್ಲಿರುವ ನಾವಾ-ಇ-ಬರಾಕ್‌ಜೈ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಟೋಲೋ ನ್ಯೂಸ್ ವರದಿ ಮಾಡಿದೆ.
ಎರಡು ನೆರೆಹೊರೆಯ ಪ್ರಾಂತ್ಯಗಳ ನೂರಾರು ತಾಲಿಬಾನ್ಗಳು ಸ್ಥಳೀಯ ಉಗ್ರರೊಂದಿಗೆ ಸೇರಿಕೊಂಡು ಲಷ್ಕರ್ ಗಾಹ್ ಅನ್ನು ವಶಪಡಿಸಿಕೊಳ್ಳಲು ಪ್ರಯತ್ನಿಸಿದರು. ಈ ಬಳಿಕ ಇತ್ತೀಚಿನ ದಿನಗಳಲ್ಲಿ ಪ್ರಾಂತ್ಯದಲ್ಲಿ ಭಾರಿ ಘರ್ಷಣೆಗೆ ಕಾರಣವಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಸೆಪ್ಟೆಂಬರ್ 24ರಂದು ಉತ್ತರ ಬಾಗ್ಲಾನ್ ಪ್ರಾಂತ್ಯದಲ್ಲಿ ತಾಂತ್ರಿಕ ವೈಫಲ್ಯದಿಂದಾಗಿ ಅಫ್ಘಾನ್ ವಾಯುಪಡೆಯ ಯುದ್ಧ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದರು.