ETV Bharat / international

ಪಾಕಿಸ್ತಾನ​ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 16 ಮಂದಿ ದುರ್ಮರಣ - ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ

ಪಾಕಿಸ್ತಾನದ ಕರಾಚಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಕಾರ್ಖಾನೆಯೊಳಗೆ ಇನ್ನೂ 25 ಮಂದಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ.

16 die in fire at chemical factory in Pakistan's Karachi
ಪಾಕ್​ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ
author img

By

Published : Aug 28, 2021, 6:46 AM IST

ಕರಾಚಿ (ಪಾಕಿಸ್ತಾನ): ಶುಕ್ರವಾರ ರಾತ್ರಿ ಪಾಕಿಸ್ತಾನದ ಕರಾಚಿಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಾರ್ಖಾನೆಯೊಳಗೆ ಇನ್ನೂ 25 ಮಂದಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಮೂವರು ಗಾಯಗೊಂಡಿದ್ದಾರೆ. ಮೃತರ ಪೈಕಿ 12 ಜನರನ್ನು ಗುರುತಿಸಲಾಗಿದ್ದು, ಸಂಬಂಧಿಕರಿಗೆ ಮೃತದೇಹಗಳನ್ನು ಹಸ್ತಾಂತರಿಸಲಾಗಿದೆ. ಆದರೆ ಉಳಿದ 4 ಮೃತದೇಹಗಳನ್ನು ಗುರುತಿಸಲು ಸಾಧ್ಯವಾಗಿಲ್ಲ ಎಂದು ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಹೇಳಿಕೆ ನೀಡಿರುವುದಾಗಿ ಡಾನ್ ಸುದ್ದಿವಾಹಿನಿ ತಿಳಿಸಿದೆ.

ಇದನ್ನೂ ಓದಿ: Watch: ಕಾಬೂಲ್​​​ನಲ್ಲಿ ಬಾಂಬ್​ ಸ್ಫೋಟಗೊಳ್ಳುವುದಕ್ಕೂ ಮುಂಚೆ ಜನ್ರು ಈ ರೀತಿ ಓಡಿದ್ರು!

ಕಾರ್ಖಾನೆ ಸುತ್ತಲಿನ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಕಾರ್ಯಾಚರಣೆ ವೇಳೆ ಅಗ್ನಿಶಾಮಕ ಸಿಬ್ಬಂದಿ ಕೂಡ ಗಾಯಗೊಂಡಿದ್ದು, ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.