ಬೀಜಿಂಗ್: ಚೀನಾದ ಕಲ್ಲಿದ್ದಲು ಗಣಿಯಲ್ಲಿ ಭಾರೀ ಪ್ರಮಾಣದ ಕಾರ್ಬನ್ ಮಾನಾಕ್ಸೈಡ್ ಬಿಡುಗಡೆಯಾಗಿ 18 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಚೀನಾದಲ್ಲಿ ನಡೆದಿದೆ.
ಎರಡು ತಿಂಗಳಿಂದ ಬಂದ್ ಆಗಿದ್ದ ಚೀನಾದ ಯೋಂಗ್ಚುವಾನ್ ಜಿಲ್ಲೆಯ ಡಯಾಶುಯಿಡಾಂಗ್ ಕಲ್ಲಿದ್ದಲು ಗಣಿಯಲ್ಲಿ ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಅವಘಡ ಸಂಭವಿಸಿದೆ.
ಭೂಮಾಳಿಗೆ ಒಳಗೆ 24 ಕಾರ್ಮಿಕರು ಉಪಕರಣಗಳನ್ನು ಕಿತ್ತುಹಾಕುವ ಕೆಲಸದಲ್ಲಿ ತೊಡಗಿದ್ದರು. ವಿಷಕಾರಿ ಅನಿಲ ಸೇವಿಸಿ 18 ಮಂದಿ ಮೃತಪಟ್ಟಿದ್ದರೆ. ಒಬ್ಬರನ್ನು ರಕ್ಷಿಸಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ, ಉಳಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.