ಪೇಶಾವರ(ಪಾಕಿಸ್ತಾನ): ವಿವಾಹ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ತ್ರಿಚಕ್ರ ವಾಹನ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಮಹಿಳೆ ಮತ್ತು ಮಕ್ಕಳು ಸೇರಿ 20 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳವಾರ ರಾತ್ರಿ ಖೈಬರ್ ಪಖ್ತುನ್ಖ್ವಾ (ಕೆಪಿಕೆ) ಪ್ರಾಂತ್ಯದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಬರುತ್ತಿದ್ದ ವಾಹನ ಕಾಲುವೆಗೆ ಉರುಳಿ ಬಿದ್ದಿದೆ ಎಂದು ಮಾಹಿತಿ ನೀಡಿದ್ದಾರೆ.
ಕಾಲುವೆಯಿಂದ ಇಪ್ಪತ್ತು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಖೈಬರ್ ಪಖ್ತುನ್ಖ್ವಾ ಮುಖ್ಯಮಂತ್ರಿ ಮೆಹಮೂದ್ ಖಾನ್ ಸಂತಾಪ ಸೂಚಿಸಿದ್ದಾರೆ.