ಇಸ್ಲಾಮಾಬಾದ್ (ಪಾಕಿಸ್ತಾನ): ಪಾಕಿಸ್ತಾನದ ಕೆಲವು ಭಾಗಗಳಲ್ಲಿ ನಿನ್ನೆ ಸಂಜೆ 6.4 ತೀವ್ರತೆಯಷ್ಟು ಭೂಕಂಪ ಸಂಭವಿಸಿದ್ದು, ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ನಷ್ಟವಾಗಿಲ್ಲ ಎಂದು ವರದಿಯಾಗಿದೆ.
ಭೂಕಂಪನವು ರಾತ್ರಿ 10.02ಕ್ಕೆ ಆರಂಭವಾಗಿದ್ದು, ಕೇಂದ್ರಬಿಂದು ತಜಿಕಿಸ್ತಾನ್ ಆಗಿದೆ. 80 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಲ್ಲಿ ಭೂಕಂಪ ಅಧ್ಯಯನ ಇಲಾಖೆ ತಿಳಿಸಿದೆ.
ಇಸ್ಲಾಮಾಬಾದ್, ಪಂಜಾಬ್, ಖೈಬರ್ ಪಖ್ತುನ್ಖ್ವಾ ಮತ್ತು ಬಲೂಚಿಸ್ತಾನದಲ್ಲಿ ಭೂಮಿ ನಡುಗಿದ್ದು, ತಕ್ಷಣವೇ ಜನ ಮನೆಯಿಂದ ಹೊರಬಂದಿದ್ದಾರೆ.
ಪಾಕಿಸ್ತಾನದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಎಲ್ಲ ಪ್ರಾಂತೀಯ ವಿಪತ್ತು ನಿರ್ವಹಣಾ ಆಯೋಗದೊಂದಿಗೆ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿದೆ.