ಬೀಜಿಂಗ್: ಚೀನಾದ ಯುನಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಮೂವರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ.
ನಿನ್ನೆ ರಾತ್ರಿಯಿಂದ ಹಲವು ಬಾರಿ ಯುನಾನ್ ಪ್ರಾಂತ್ಯದ ಎಲ್ಲಾ 12 ಪ್ರದೇಶಗಳು ಮತ್ತು ನಗರಗಳಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 7.3ರ ವರೆಗೂ ತೀವ್ರತೆ ದಾಖಲಾಗಿದೆ. ಯಾಂಗ್ಬಿ ಯಿ ಪ್ರದೇಶ ಹೆಚ್ಚು ಹಾನಿಗೊಳಗಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ನೇಪಾಳ ಸಂಸತ್ ವಿಸರ್ಜಿಸಿದ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ: ಮಧ್ಯಂತರ ಚುನಾವಣೆಗೆ ಆದೇಶ
20,192 ಮನೆಗಳಲ್ಲಿನ ಸುಮಾರು 72,317 ಜನರು ಭೂಕಂಪಕ್ಕೆ ತುತ್ತಾಗಿದ್ದು, ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಸಾವು-ನೋವು ಹೆಚ್ಚಾಗುವ ಸಾಧ್ಯತೆಯಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.