ಇಸ್ಲಾಮಾಬಾದ್: ಪಾಕಿಸ್ತಾನ ಮಿಲಿಟರಿಗೆ ಸೇರಿದ್ದ ತರಬೇತಿ ಯುದ್ಧ ವಿಮಾನ ಪತನವಾದ ಪರಿಣಾಮ ವಿಮಾನದಲ್ಲಿದ್ದ ಐವರು ಹಾಗೂ 12 ಜನ ನಾಗರಿಕರು ಮೃತಪಟ್ಟಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ರಾವಲ್ಪಿಂಡಿಯ ಗ್ಯಾರಿಸನ್ ನಗರದಲ್ಲಿ ಮಂಗಳವಾರ ಮುಂಜಾನೆ ವಿಮಾನ ಪತನವಾಗಿದ್ದು, ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ.
ವಿಮಾನ ಪತನದಿಂದ ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸೇನೆ ಹಾಗೂ ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.