ಲಾಹೋರ್ : ದಕ್ಷಿಣ ಏಷ್ಯಾದ ಅತೀ ದೊಡ್ಡ ಸೂಫಿ ಪ್ರಾರ್ಥನಾ ಮಂದಿರ ದಾತಾ ದರ್ಬಾರ್ ಬಳಿ ಬಾಂಬ್ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ ಎಂದು ಪಾಕ್ ಮಾಧ್ಯಮ ವರದಿ ಮಾಡಿದೆ.
ಪಾಕ್‌ನ ಬೃಹತ್ ನಗರ ಲಾಹೋರ್ನಲ್ಲಿರುವ ಪ್ರಾರ್ಥನಾ ಮಂದಿರದ ಬಳಿ ಹೆಚ್ಚು ಜನರು ಸೇರಿದ್ದ ವೇಳೆ ಬಾಂಬ್ ಸ್ಫೋಟ ಸಂಭವಿಸಿದೆ. ಈ ಹಿಂದೆಯೂ ಇದೇ ಮಂದಿರವನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆದಿತ್ತು. ಅಂದು 40ಕ್ಕೂ ಹೆಚ್ಚು ಜನರು ದಾರುಣವಾಗಿ ಸಾವಿಗೀಡಾಗಿದ್ದರು.
ಇಂದು ನಡೆದ ಘಟನೆ ಭದ್ರತಾ ಅಧಿಕಾರಿಗಳ ವಾಹನವನ್ನು ಗುರಿಯಾಗಿಸಿಕೊಂಡು ನಡೆದ ಆತ್ಮಾಹುತಿ ದಾಳಿಯಾಗಿರಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಮೊಹಮ್ಮದ್ ಕಾಶಿಫ್ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದೇವೆ ಎಂದೂ ಹೇಳಿದ್ದಾರೆ.